ಜಿ20 ಶೃಂಗಸಭೆಯಲ್ಲಿ ನರೇಂದ್ರ ಮೋದಿ (ಕೃಪೆ: ಟ್ವಿಟರ್ )
ಟರ್ಕಿ: ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಭಾರತ ಸಹನೆ ತೋರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಟರ್ಕಿಯಲ್ಲಿ ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ವಿದೇಶದಲ್ಲಿರುವ ಕಪ್ಪು ಹಣವನ್ನು ತರಲು ನಾವು ಹೊಸ ಕಾನೂನು ರೂಪಿಸಿದ್ದೇವೆ ಎಂದು ಹೇಳಿದ್ದಾರೆ.
ಶೃಂಗಸಭೆಯಲ್ಲಿ ಆರ್ಥಿಕ ಅಭಿವೃದ್ಧಿ ಬಗ್ಗೆ ಮಾತನಾಡಿದ ಮೋದಿ, ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಗಮನಿಸಿ, ಅವುಗಳಿಗೆ ಉತ್ತೇಜನ ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ತಯಾರಾಗಬೇಕು. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಮೂಲಭೂತ ಸೌಕರ್ಯ ಮತ್ತು ಆರ್ಥಿಕ ಸಹಾಯಗಳನ್ನು ಮಾಡಿಕೊಡಬೇಕು. ಅದೇ ವೇಳೆ ತಂತ್ರಜ್ಞಾನವನ್ನು ಬಳಸಿ ಪುರೋಗತಿ ಹೊಂದಬೇಕು ಎಂದಿದ್ದಾರೆ.
ಏತನ್ಮಧ್ಯೆ, ವಿದೇಶ ರಾಷ್ಟ್ರಗಳಲ್ಲಿರುವ ಕಪ್ಪುಹಣವನ್ನು ಸ್ವದೇಶಕ್ಕೆ ಮರಳಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮಗೆ ಸಹಾಯಬೇಕಿದೆ ಎಂದು ಮೋದಿ ಹೇಳಿದ್ದಾರೆ.