ಕಾನ್ಪುರ: ಚಲಿಸುತ್ತಿರುವ ಕಾರಿನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ
ಚಲಿಸುತ್ತಿರುವ ಕಾರಿನಲ್ಲಿ ಎಂಟನೇ ಕ್ಲಾಸಿನ ವಿದ್ಯಾರ್ಥಿನಿಯೊಬ್ಬಳನ್ನು ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿನಿ ಔಷಧಿ...
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ ಎರಡು ಮಾನಭಂಗ ಪ್ರಕರಣಗಳು ವರದಿಯಾಗಿವೆ.
ಪ್ರಕರಣ 1: ಚಲಿಸುತ್ತಿರುವ ಕಾರಿನಲ್ಲಿ ಎಂಟನೇ ಕ್ಲಾಸಿನ ವಿದ್ಯಾರ್ಥಿನಿಯೊಬ್ಬಳನ್ನು ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿನಿ ಔಷಧಿ ಖರೀದಿಸಲೆಂದು ಹೋದಾಗ ಚಕೇರಿ ಪೊಲೀಸ್ ಠಾಣೆಯ ಬಳಿ ಆಕೆಯನ್ನು ಅಪಹರಿಸಲಾಗಿತ್ತು. ಅಪಹರಿಸಿದ ನಂತರ ನಾಲ್ಕು ಮಂದಿ ಸೇರಿ ಆಕೆಯನ್ನು ಸಾಮೂಹಿಕ ಅತ್ಯಾಚಾರಗೈದಿದ್ದಾರೆ. ಅತ್ಯಾಚಾರಗೈದವರು ತನ್ನನ್ನು ಉನ್ನಾವೋ ಜಿಲ್ಲೆಯ ಬಂತಾರಾ ಟೋಲ್ ಪ್ಲಾಜಾ ಬಳಿಯಲ್ಲಿರುವ ಪೊದೆ ಬಳಿ ಎತ್ತಿ ಬಿಸಾಡಿ ಹೋಗಿದ್ದಾರೆ ಎಂದು ಸಂತ್ರಸ್ತೆಯ ಹೇಳಿಕೆ ನೀಡಿದ್ದಾಳೆ.
ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶಂಕಿತ ಆರೋಪಿಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಪ್ರಕರಣ 2 : ಪತಾರಾ ಗ್ರಾಮದಲ್ಲಿ 16ರ ಹರೆಯದ ಹುಡುಗಿಯೊಬ್ಬಳನ್ನು ಅನಾಮಿಕ ಮತ್ತು ಆತನ ಗೆಳೆಯ ಸೇರಿ ಅತ್ಯಾಚಾರಗೈದಿದ್ದಾರೆ.
ಅತ್ಯಾಚಾರಕ್ಕೊಳಗಾದ ಹುಡುಗಿ ಅವಳ ಅಪ್ಪನಿಗೆ ಊಟ ಕೊಡಲೆಂದು ಹೊಲಕ್ಕೆ ಹೋದಾಗ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
ಈ ಪ್ರಕರಣದ ಬಗ್ಗೆ ಘಟಂಪುರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದು, ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.
ಭಾರತದಲ್ಲಿ ಅತೀ ಹೆಚ್ಚು ನಡೆಯುವ ಅಪರಾಧಗಳಲ್ಲಿ ಅತ್ಯಾಚಾರವು ನಾಲ್ಕನೇ ಸ್ಥಾನದಲ್ಲಿದೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ 2013ರ ವಾರ್ಷಿಕ ವರದಿ ಪ್ರಕಾರ 2012ರಲ್ಲಿ 24, 923 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 24,470 ಪ್ರಕರಣಗಳಲ್ಲಿ ಪರಿಚಿತರೇ ಮಹಿಳೆಯರ ಮೇಲೆ ಅತ್ಯಾಚಾರಗೈದ ಪ್ರಕರಣಗಳಾಗಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.