ಅಮಿತ್ ಸಿಂಗ್ 
ದೇಶ

ಪತಿ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಬಾಲ್ಕನಿಯಿಂದ ಜಿಗಿದ ಪತ್ನಿ

ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ನವದೆಹಲಿ: ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ರಾತ್ರಿ ನೋಯ್ಡಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ದೆಹಲಿ  ಪೊಲೀಸ್ ಸ್ಪೆಷಲ್ ಸೆಲ್‌ನ ಅಸಿಸ್ಟೆಂಟ್ ಕಮಿಷನರ್ ಅಮಿತ್ ಸಿಂಗ್ (34)  ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಣೆಯಲ್ಲಿ ಗುಂಡಿನ ಶಬ್ದ ಕೇಳಿದೊಡನೆ ಅಮಿತ್ ಸಿಂಗ್ ಪತ್ನಿ ಸರಿತಾ ಕೆಳಮಹಡಿಗೆ ಓಡಿ ಹೋಗಿ ಸೆಕ್ಯೂರಿಟಿ ಗಾರ್ಡ್ ಮತ್ತು ನೆರೆಮನೆಯವರನ್ನು ಕರೆದಿದ್ದಾರೆ. ಆಮೇಲೆ ಕೋಣೆಗೆ ಬಂದು ನೋಡಿದಾಗ ಅಮಿತ್ ರಕ್ತದ ಮಡುವಿನಲ್ಲಿದ್ದದ್ದು ಕಂಡು ಬಂದಿದೆ. ಅದನ್ನು ನೋಡಿದ ಕೂಡಲೇ ಸರಿತಾ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ.
ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆಸ್ಪತ್ರೆಗೆ ತಲುಪುವ ವೇಳೆ ಅಮಿತ್ ಸಾವನ್ನಪ್ಪಿದ್ದರು. ಸರಿತಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಅಮಿತ್ ಸಿಂಗ್ ಮತ್ತು ಸರಿತಾ ದಂಪತಿಗಳು ಮೂರು ವರ್ಷದ ಹಿಂದೆ ಮದುವೆಯಾಗಿದ್ದು ಅವರಿಗೆ 18 ತಿಂಗಳ ಮಗು ಇದೆ.
ಇತ್ತೀಚೆಗೆ ದಂಪತಿ ನಡುವೆ ಜಗಳ ನಡೆದಿತ್ತು ಎಂದು ಪೊಲೀಸ್ ಮೂಲಗಳು ಹೇಳಿವೆ.
ಅಲ್ಲಿ ಏನೆಲ್ಲಾ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಅವರಿಗೆ ಒಬ್ಬಳು ಮಗಳಿದ್ದಾಳೆ. ತನಿಖೆ ನಡೆದ ನಂತರವೇ ನಮಗೆ ಈ ಘಟನೆಯ ಬಗ್ಗೆ ಪ್ರತಿಕ್ರಯಿಸಲು ಸಾಧ್ಯ ಎಂದು ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ದಿನೇಶ್ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT