ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ (ಸಾಂದರ್ಭಿಕ ಚಿತ್ರ) 
ದೇಶ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಕಳೆದ ಹಲವು ದಿನಗಳಿಂದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬರುತ್ತಿರುವ ಪಾಕಿಸ್ತಾನ ಸೈನಿಕರು ಮಂಗಳವಾರ ಕೂಡ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಕಾಶ್ಮೀರದ...

ಜಮ್ಮು: ಕಳೆದ ಹಲವು ದಿನಗಳಿಂದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬರುತ್ತಿರುವ ಪಾಕಿಸ್ತಾನ ಸೈನಿಕರು ಮಂಗಳವಾರ ಕೂಡ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸೋಮವಾರ ತಡ ರಾತ್ರಿಯಿಂದ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ತಿಳಿದುಬಂದಿದೆ.

ಸಾಂಬಾ ವಲಯದ ಮುಂಚೂಣಿಯ ಭಾರತೀಯ ಹೊರ ಠಾಣೆಗಳನ್ನು ಗುರಿಯಾಗಿಸಿಟ್ಟುಕೊಂಡಿರುವ ಪಾಕಿಸ್ತಾನ ಸೇನಿಯು ಅಂತಾರಾಷ್ಟ್ರೀಯ ಗಡಿಯಲ್ಲಿ ಕಳೆದ ರಾತ್ರಿಯಿಂದಲೂ ಕದನ ವಿರಾಮವನ್ನು ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್ಎಫ್ ಅಧಿಕಾರಿ,  ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಯುತ್ತಿರುವುದಾಗಿ ಹಾಗೂ ಶಂಕಿತ ಚಲನವಲಗಳು ನಡೆಯುತ್ತಿರುವುದಾಗಿ ತಿಳಿಬಂದಿತು. ಹೀಗಾಗಿ ಭದ್ರತಾ ಪಡೆಗಳು ಪತ್ತೆಹಚ್ಚಲು ಕಾರ್ಯಾಚರಣೆಗಿಳಿದಿತ್ತು. ಆದರೆ. ಈ ವೇಳೆ ಯಾವುದೇ ವಿದ್ಯಾಮಾನಗಳು ಗೋಚರವಾಗಿರುವಂತೆ ತಿಳಿದುಬರಲಿಲ್ಲ. ದಾಳಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಗಡಿಯಲ್ಲಿ ಭಾರತೀಯ ಯೋಧರು ಕಣ್ಗಾವಲಿಸಿದ್ದಾರೆಂದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ