ದೇಶ

ಅಶೋಕ್ ಸಿಂಘಾಲ್‌ಗೆ ಶ್ರದ್ಧಾಂಜಲಿ ವಿಚಾರ: ವಿಧಾನಸಭೆಯಲ್ಲಿ ಹೈಡ್ರಾಮಾ

ನಿನ್ನೆ ನಿಧನರಾದ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತ...

ನವದೆಹಲಿ: ನಿನ್ನೆ ನಿಧನರಾದ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆ ಬುಧವಾರ ಭಾರಿ ಹೈಡ್ರಾಮಾವೇ ನಡೆಯಿತು.

ಚಳಿಗಾಲ ಅಧಿವೇಶನದ ಮೊದಲ ದಿನವಾದ ಇಂದು ಪ್ಯಾರೀಸ್ ದಾಳಿಯಲ್ಲಿ ಮೃತಪಟ್ಟವರಿಗೆ ಸದನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ವಿಎಚ್‌ಪಿ ನಾಯಕ ಅಶೋಕ್ ಸಿಂಘಾಲ್ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ಆದರೆ ಇದಕ್ಕೆ ಎಎಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಅಶೋಕ್ ಸಿಂಘಾಲ್ ಅವರು 'ರಾಜ ಪುರುಷ'ರಾಗಿದ್ದು ಸದನದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ವಿಜೇಂದ್ರ ಗುಪ್ತಾ ಅವರು ಒತ್ತಾಯಿಸಿದರು. ಇದಕ್ಕೆ ಆಮ್ ಆದ್ಮಿ ಶಾಸಕರಾದ ಸೋಮನಾಥ್ ಭಾರ್ತಿ ಹಾಗೂ ಅಮಂತುಲ್ಲಾ ಖಾನ್ ಅವರು ಏರು ಧ್ವನಿಯಲ್ಲಿ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಅಶೋಕ್ ಸಿಂಘಾಲ್ ಅವರು ಭೇದಭಾವ ಮಾಡುತ್ತಿದ್ದರು ಎಂದು ಆರೋಪಿಸಿದರು.

ಅಶೋಕ್ ಸಿಂಘಾಲ್ ಅವರು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸಿರಲಿಲ್ಲ ಎಂದು ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಬಿಜೆಪಿ ಶಾಸಕರ ಮನವಿಯನ್ನು ತಿರಸ್ಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!