ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಿತೀಶ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್
Shilpa D
Updated On : 18 Nov 2015, 3:43 am

ಪಾಟ್ನಾ: ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ನವೆಂಬರ್ 20 ರಂದು ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಮೂಲಕ ನಿತೀಶ್ ಕುಮಾರ್ ಆಹ್ವಾನ ನೀಡಿದ್ದಾರೆ.

ನಾಲ್ಕು ದಿನಗಳ ಛಾತ್ ಹಬ್ಬ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ಪ್ರಮುಖ ನಾಯಕರಿಗೆ ನಿತೀಶ್ ಕುಮಾರ್ ತಾವೇ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ.

ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದಾರೆ. ಆದರೆ ಮೋದಿ ಅವರು ರಾಜಕೀಯ ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಬರುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು ಎಂದು ಬಿಹಾರ ಜೆಡಿಯು ಅಧ್ಯಕ್ಷ ಬಸಿಷ್ಟ ನಾರಾಯಣ್ ಸಿಂಗ್ ಹೇಳಿದ್ದಾರೆ.

 ಪ್ರಧಾನಿ ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿರುವುದರಿಂದ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಬಿಹಾರ ಬಿಜೆಪಿ ಉಪಾಧ್ಯಕ್ಷ ಸಂಜಯ್ ಮಯೂಕ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments