(ಸಾಂದರ್ಭಿಕ ಚಿತ್ರ) 
ದೇಶ

ಬಿಹಾರದಲ್ಲಿ ಕೋಮುಗಲಭೆ: 4 ಸಾವು

ಕೋಮುಗಲಭೆ ಸಂಭವಿಸಿದ ಪರಿಣಾಮ ದುರಂತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ...

ಪಾಟ್ನ: ಕೋಮು ಗಲಭೆ ಸಂಭವಿಸಿದ ಪರಿಣಾಮ ದುರಂತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಮಂಗಳವಾರ ಮಧ್ಯಹ್ನ 1.30ರ ಸುಮಾರಿಗೆ ರಾಜೇಂದ್ರ ಚೌದರಿಯವರು ಮನೆಯ ಬಾಗಿಲ ಬಳಿ ತಮ್ಮ ಮೊಮ್ಮಗಳಾದ 6 ತಿಂಗಳ ಮಗು ಸಪ್ನಾಳನ್ನು ಎತ್ತಿಕೊಂಡು ಕುಳಿತುಕೊಂಡಿದ್ದರು. ಈ ವೇಳೆ ಕಾರಿನ ನಿಯಂತ್ರಣ ಕಳೆದುಕೊಂಡ ವ್ಯಕ್ತಿಯೊಬ್ಬ ಕಾರನ್ನು ಇಬ್ಬರ ಮೇಲೆ ಹರಿಬಿಟ್ಟಿದ್ದ. ಪರಿಣಾಮ ರಾಜೇಂದ್ರ ಚೌದರಿ ಹಾಗೂ ಮೊಮ್ಮಗಳು ಸಪ್ನ ಸಾವನ್ನಪ್ಪಿದ್ದರು. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ಹಿಡಿದು  ಬಂಧನಕ್ಕೊಳಪಡಿಸಿದ್ದರು.

ಘಟನೆ ನಡೆದ ಮುಂದಿನ ದಿನ ಬುಧವಾರ ಬೆಳಗ್ಗೆ ಗ್ರಾಮದಲ್ಲಿ ವದಂತಿಯೊಂದು ಹರಡಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರಿಗೆ ನಿನ್ನೆ ಅಪಘಾತ ಮಾಡಿದ ಕಾರೊಂದು ಮತ್ತೆ ಗುದ್ದಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿತ್ತು.

ಈ ವಿಚಾರ ತಿಳಿದ ಗ್ರಾಮಸ್ಥರು ಕೆಂಡಾಮಂಡಲವಾಗಿದ್ದಾರೆ. ನಂತರ ಮಸೀದಿ ಚೌಕಿಗೆ ಬಂದ ಗ್ರಾಮಸ್ಥರು ಅಲ್ಪಸಂಖ್ಯಾತ ಜನರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಪ್ರತಿಭಟನೆಗಿಳಿದಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದು ಪ್ರತಿಭಟನೆ ಹಿಂಸಾಚಾರಕ್ಕೆ ಹಿರಿಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬ ಮಾಹಿತಿ ನೀಡಿದ್ದಾರೆ.

ಪ್ರತಿಭಟನಾಗಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡನ್ನು ಹಾರಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಗಳನ್ನು ಎಸಯಲಾಗಿದೆ. ಇದರ ಪರಿಣಾಮ ಅಲ್ಪಸಂಖ್ಯಾತರಿಗೆ ಸೇರಿದ ಸುಮಾರು 10 ಮನೆಗಳು ಸುಟ್ಟು ಭಸ್ಮವಾಗಿದೆ.

ಪ್ರತಿಭಟನೆ ವೇಳೆ ಕಲ್ಲೆಸೆತದಲ್ಲಿ ಠಾಣಾಧಿಕಾರಿ ಅಜಿತ್ ಕುಮಾರ್ ಗೆ ಗಂಭೀರ ಗಾಯವಾಗಿದ್ದು, ಅಜಿತ್ ಅವರನ್ನು ಪಾಟ್ನಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ. ಈ ವೇಳೆ 17 ವರ್ಷದ ರಾಕೇಶ್ ಎಂಬಾತ ಗಂಭೀರವಾಗಿ ಗೊಯಗೊಂಡಿದ್ದಾನೆ. ಈ ವೇಳೆ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಆದರೂ ಆತ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ. ಇದರಂತೆ ಘಟನೆ ವೇಳೆ ಇನ್ನಿಬ್ಬರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ಗ್ರಾಮದಲ್ಲಿನ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಘಟನೆ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಗಾಗಲೇ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರು ಪರಿಸ್ಥಿತಿ ಪರಿಶೀಲಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಭೆ ನಂತರ ಮಾತನಾಡಿರುವ ನಿತೀಶ್ ಕುಮಾರ್ ಅವರು, ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆ ಆದೇಶ ನೀಡಲಾಗಿದ್ದು, ಜನರು ಶಾಂತಿ ಹಾಗೂ ಭ್ರಾತೃತ್ವ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ 4 ಲಕ್ಷ ಪರಿಹಾರ ಧನವನ್ನು ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!