ಪೀಟರ್ ಮುಖರ್ಜಿ, ಇಂದ್ರಾಣಿ 
ದೇಶ

ಶೀನಾ ಬೋರಾ ಹತ್ಯೆ: ಸಿಬಿಐನಿಂದ ಪೀಟರ್ ಮುಖರ್ಜಿ ಬಂಧನ

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ...

ಮುಂಬೈ: ದೇಶದಲ್ಲಿ ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 
ಪೀಟರ್ ಮುಖರ್ಜಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೀನಾ ತಾಯಿ ಇಂದ್ರಾಣಿ ಮುಖರ್ಜಿ ಅವರ ಪತಿಯಾಗಿದ್ದಾರೆ. 
ಇದಕ್ಕೂ ಮುನ್ನ ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸಿಬಿಐ 100 ಪುಟಗಳ ಚಾರ್ಜ್‌ಶೀಟನ್ನು ಮುಂಬೈನ ಇಸ್‌ಪ್ಲಾನಡೆ ಕೋರ್ಟ್‌ಗೆ ಸಲ್ಲಿಸಿದೆ. ಚಾರ್ಜ್ ಶೀಟ್ ನಲ್ಲಿ ಶೀನಾ ಬೋರಾ ತಾಯಿ ಇಂದ್ರಾಣಿ ಮುಖರ್ಜಿ ಹಾಗೂ ಆಕೆಯ ಮಾಜಿ ಪತಿ ಸಂಜೀವ್ ಖನ್ನಾ, ಚಾಲಕ ಶ್ಯಾಮ್ ರೈನನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.
2012ರ ಏಪ್ರಿಲ್ ನಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಮುಂಬೈನ ರಾಯ್ ಗಢದ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!