ಮನಮೋಹನ್ ಸಿಂಗ್ 
ದೇಶ

ಅಭಿವೃದ್ಧಿಗೆ ನೆಹರು, ಇಂದಿರಾ ಅನುಸರಿಸಿ: ಮೋದಿಗೆ ಮನಮೋಹನ್ ಸಿಂಗ್ ಸಲಹೆ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಯೋಜನೆಗಳಿಗೆ ಯಾವುದೇ ಗೊತ್ತು ಗುರಿ ಇಲ್ಲ ಎಂದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಭಿವೃದ್ಧಿಯಲ್ಲಿ...

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಯೋಜನೆಗಳಿಗೆ ಯಾವುದೇ ಗೊತ್ತು ಗುರಿ ಇಲ್ಲ ಎಂದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಭಿವೃದ್ಧಿಯಲ್ಲಿ ಪಂಡಿತ ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ಅವರನ್ನು ಅನುಸರಿಸುವಂತೆ ಗುರುವಾರ ಸಲಹೆ ನೀಡಿದ್ದಾರೆ.

ಇಂದಿರಾ ಗಾಂಧಿ ಅವರ 98ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, 'ಭಾರತದಲ್ಲಿ ಕೃಷಿ ಅಭಿವೃದ್ಧಿಗೆ ನೆಹರು ಹಾಗೂ ಇಂದಿರಾ ಗಾಂಧಿ ಕಾರಣವಾಗಿದ್ದು, ಪ್ರಧಾನಿ ಮೋದಿ ಅವರು ಅವರಿಂದ ಪಾಠ ಕಲಿಯಬೇಕು ಎಂದರು'.

'ಒಮ್ಮೆ ಇತಿಹಾಸವನ್ನು ನೋಡಿ, ದೇಶದ ಆರ್ಥಿಕತೆಯನ್ನು ಬಲಪಡಿಸಿದ ಕಾಂಗ್ರೆಸ್ ಮಹತ್ವ ತಿಳಿಯುತ್ತದೆ ಮತ್ತು ಅದನ್ನು ಗೊತ್ತು ಗುರಿ ಇಲ್ಲದ ಇಂದಿನ ಯೋಜನೆಗಳೊಂದಿಗೆ ಹೋಲಿಕೆ ಮಾಡಿ' ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ಸಂಸತ್ತಿನಲ್ಲಿ ಇಂದಿರಾ ಗಾಂಧಿ ಅವರನ್ನು 'ದುರ್ಗಾ' ಎಂದಿದ್ದನ್ನು ಸಿಂಗ್ ಈ ವೇಳೆ ನೆನಪಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!