ಮಾಲ್(ಸಾಂದರ್ಭಿಕ ಚಿತ್ರ) 
ದೇಶ

ಮಾಜಿ ಪ್ರೇಯಸಿ ಎದುರೆ ಮಾಲ್ ನಿಂದ ಹಾರಿ ಭಗ್ನ ಪ್ರೇಮಿ ಆತ್ಮಹತ್ಯೆ!

ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಮಾಜಿ ಪ್ರೇಯಸಿ ಎದುರೆ ಮಾಲ್ ನ ಐದನೇ ಅಂತಸ್ಥಿನಿಂದ ಜಿಗಿದು ಭಗ್ನ ಪ್ರೇಮಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ...

ಥಾಣೆ: ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಮಾಜಿ ಪ್ರೇಯಸಿ ಎದುರೆ ಮಾಲ್ ನ ಐದನೇ ಅಂತಸ್ಥಿನಿಂದ ಜಿಗಿದು ಭಗ್ನ ಪ್ರೇಮಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಥಾಣೆಯಲ್ಲಿ ನಡೆದಿದೆ. 
ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿಯನ್ನು 24 ವರ್ಷದ ವೈಭವ್ ವಿಷ್ಣು ಅಝ್ಗೇಕರ್ ಥಾಣೆಯ ಬಲ್ಕುಮ್ ನ ದದ್ಲಾನಿ ಪಾಕ್ ನ ನಿವಾಸಿ ಎಂದು ತಿಳಿದುಬಂದಿದೆ. ಇತ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 20 ಹರೆಯದ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಪ್ರಕರಣ ಸಂಬಂಧ ವೈಭವ್ ಜೈಲಿನಲ್ಲಿದ್ದು ಬೇಲ್ ಮೇಲೆ ಹೊರ ಬಂದಿದ್ದ. 
ಇಂದು ಮಾಜಿ ಪ್ರೇಯಸಿಯನ್ನು ಭೇಟಿ ಮಾಡಿದ ವೈಭವ್ ಮದುವೆಯಾಗುವುದಾಗಿ ಪೀಡಿಸಿದ್ದಾನೆ. ಆತನ ಮನವಿಯನ್ನು ಪ್ರೇಯಸಿ ತಿರಸ್ಕರಿಸಿದ್ದಾಳೆ. ಈ ವೇಳೆ ಮನನೊಂದ ಪ್ರೇಮಿ ಮಾಲ್ ನ ಐದನೇ ಅಂತಸ್ಥಿನಿಂದ ಜಿಗಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ವೈಭವ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗಾಗಲೇ ವೈಭವ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)