ಸೋನಿಯಾ ಗಾಂಧಿ ಕ್ಷಮೆ ಕೇಳಲಿ
ಪಾಕ್ ಮಾಧ್ಯಮಗಳ ಮುಂದೆ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆ ದೇಶದ್ರೋಹಕ್ಕೆ ಸಂಬಂಧಿಸಿದ್ದಾಗಿದ್ದು...
ನವದೆಹಲಿ: ಪಾಕ್ ಮಾಧ್ಯಮಗಳ ಮುಂದೆ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆ ದೇಶದ್ರೋಹಕ್ಕೆ ಸಂಬಂಧಿಸಿದ್ದಾಗಿದ್ದು, ಕಾಂಗ್ರೆಸ್ ವರಿಷ್ಠೆ ಸೋನಿಯಾ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಖುರ್ಷಿದ್ ಅವರು, ಪಾಕಿಸ್ತಾನದೆಡೆಗಿನ ಭಾರತದ ಕಠಿಣ ನಿಲುವನ್ನು ಅಲ್ಲಿನ ಮಾಧ್ಯಮಗಳಲ್ಲಿ ಟೀಕಿಸಿದ್ದರು. ಅಯ್ಯರ್ ಅವರು, ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆಯದ ಹೊರತು ಎರಡೂ ದೇಶಗಳ ಮಾತುಕತೆ ಆರಂಭವಾಗುವುದೇ ಇಲ್ಲ ಎಂದಿದ್ದರು.
ಈ ಹೇಳಿಕೆಗಳನ್ನು ಪ್ರಸ್ತಾಪಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹಾಗೂ ಪ್ರಕಾಶ್ ಜಾವಡೇಕರ್ ಅವರು, ಕಾಂಗ್ರೆಸ್ ಪಕ್ಷವು ಈ ಇಬ್ಬರು ನಾಯಕರ ಹೇಳಿಕೆಗಳನ್ನು ಖಂಡಿಸಬೇಕು ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸೋನಿಯಾ ಅವರು ಈ ಸಂಬಂಧ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.