ಅಪಘಾತ(ಸಾಂದರ್ಭಿಕ ಚಿತ್ರ) 
ದೇಶ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಐವರ ಸಾವು

ಕಾರು-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತೂರಿನಲ್ಲಿ ಸಂಭವಿಸಿದೆ...

ಮೆಟ್ಟಪುರ್ವಪಲ್ಲಿ(ಚಿತ್ತೂರು): ಕಾರು-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತೂರಿನಲ್ಲಿ ಸಂಭವಿಸಿದೆ. 
ಆಂಧ್ರದ ಚಿತ್ತೂರು ಜಿಲ್ಲೆಯ ಮೆಟ್ಟಪುರ್ವಪಲ್ಲಿ ಗ್ರಾಮದ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸಾವನ್ನಪ್ಪಿದ್ದಾರೆ. 
ಮೃತರನ್ನು ಕಾರು ಚಾಲಕ ವೇಣುಗೋಪಾಲ್(22), ಸುಮಿತ್ರ(25), ಕಾಳಮ್ಮ, ರಮಣಮ್ಮ ಹಾಗೂ 3 ವರ್ಷದ ಮೇನಕ ಎಂದು ತಿಳಿದುಬಂದಿದೆ.
ಬೈರೆಡ್ಡಿಪಲ್ಲಿಯಲ್ಲಿನ ವಿವಾಹ ಸಮಾರಂಭಕ್ಕೆಂದು ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್‌ಗೆ 8 ವರ್ಷ ಕಠಿಣ ಜೈಲು ಶಿಕ್ಷೆ

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?