ದೇಶ

ಪೀಟರ್ ಮುಖರ್ಜಿ 3 ದಿನಗಳ ಕಾಲ ಸಿಬಿಐ ವಶಕ್ಕೆ

Lingaraj Badiger

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧ ಬಂಧನಕ್ಕೊಳಗಾಗಿದ್ದ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ನಿನ್ನೆ ಪೀಟರ್ ಮುಖರ್ಜಿಯನ್ನು ಬಂಧಿಸಿತ್ತು. ಇಂದು  ಆರೋಪಿಯನ್ನು ಸಿಬಿಐ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 14 ದಿನಗಳ ಕಾಲ ನಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಪತ್ನಿ ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಹತ್ಯೆ ಪ್ರಕಣದ ಸಂಚಿನ ಬಗ್ಗೆ ಪೀಟರ್ ಮುಖರ್ಜಿಗೆ ಮಾಹಿತಿ ಇದ್ದರೂ, ಅವರನ್ನು ರಕ್ಷಿಸಿದ್ದಾರೆ ಎಂದು ಸಿಬಿಐ ವಕೀಲರು ವಾದಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆರೋಪಿ ಪರ ವಕೀಲರು, ನನ್ನ ಕಕ್ಷಿದಾರ ನಿರಪರಾಧಿ, ಶೀನಾ ಹತ್ಯೆ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ. ಅವರು ಒಬ್ಬ ಅಮಾಯಕ ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್, ಆರೋಪಿಯನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿದೆ.

SCROLL FOR NEXT