ಮಹಿಳಾ ಅಧಿಕಾರಿಯ ಮಡಿಲಲ್ಲಿ ಕುಳಿತ ಪೊಲೀಸ್; ಸಾಮಾಜಿಕ ತಾಣದಲ್ಲಿ ವೈರಲ್ ಆದ ಫೋಟೋ
ರಜೌರಿ ಜಿಲ್ಲೆಯ ಬುಧಾಲ್ ಪೊಲೀಸ್ ಠಾಣೆಯಲ್ಲಿ ಬಿಳಿಗಡ್ಡದ ಪೊಲೀಸ್ ಒಬ್ಬರು ಮಹಿಳಾ ಪೊಲೀಸ್ ಅಧಿಕಾರಿಯ ಮಡಿಲಲ್ಲಿ ಕುಳಿತ...
ಜಮ್ಮು: ರಜೌರಿ ಜಿಲ್ಲೆಯ ಬುಧಾಲ್ ಪೊಲೀಸ್ ಠಾಣೆಯಲ್ಲಿ ಬಿಳಿಗಡ್ಡದ ಪೊಲೀಸ್ ಒಬ್ಬರು ಮಹಿಳಾ ಪೊಲೀಸ್ ಅಧಿಕಾರಿಯ ಮಡಿಲಲ್ಲಿ ಕುಳಿತ ಫೋಟೊವೊಂದು ಈಗ ಸಾಮಾಜಿಕ ತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ಪೊಲೀಸ್ ಠಾಣೆಯಲ್ಲಿ ಕುರ್ಚಿಯಲ್ಲಿ ಆಸೀನರಾಗಿದ್ದ ಮಹಿಳಾ ಎಸ್ಪಿಒ (ಸ್ಪೆಷಲ್ ಪೊಲೀಸ್ ಆಫೀಸರ್ ) ಮಡಿಲಲ್ಲಿ ಜಕೀರ್ ಹುಸೈನ್ ಎಂಬ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಕುಳಿತುಕೊಂಡಿರುವ ಫೋಟೋ ಫೇಸ್ಬುಕ್ ಮತ್ತು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ.
ಆಗಸ್ಟ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಈ ಫೋಟೋ ನಮ್ಮ ಗಮನಕ್ಕೆ ಬಂದ ಕೂಡಲೇ ನಾವು ಹೆಡ್ ಕಾನ್ಸ್ಟೇಬಲ್ನ್ನು ನೌಕರಿಯಿಂದ ವಜಾ ಮಾಡಿದ್ದೇವೆ ಎಂದು ರಜೌರಿ -ಪೂಂಚ್ ರೇಂಜ್ನ ಡಿಐಜಿ ಎಕೆ ಆತ್ರಿ ಹೇಳಿದ್ದಾರೆ.
ಅದೇ ವೇಳೆ ಈ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಪೊಲೀಸ್ ಇಲಾಖೆಯಲ್ಲಿದ್ದ ಇತರರ ವಿರುದ್ಧ ತನಿಖೆ ನಡೆಸಲಾಗಿದೆ.
ಪೊಲೀಸರ ಈ ರೀತಿಯ ವರ್ತನೆಯನ್ನು ನಾವು ಸಹಿಸುವುದಿಲ್ಲ ಎಂದು ಡಿಐಜಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.