ಆಗ್ರಾ: ದೇಶಾದ್ಯಂತ ಗೋಮಾಂಸ ಸೇವನೆ ಬಗ್ಗೆ ಹಲವು ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ.
ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಿಂದೂಗಳೂ ಗೋಮಾರಾಟ ಮಾಡುವ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದರ್ ಸಾಚಾರ್ ಹೇಳಿದ್ದಾರೆ.
ಮಥುರಾದ ಆರ್ ಸಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಸ್ಲಿಮರಿಗಿಂತ ಹೆಚ್ಚು ಅಂದರೆ ಶೇ.95 ರಷ್ಟು ಗೋ ವ್ಯಾಪಾರಿಗಳು ಹಿಂದೂಗಳಾಗಿದ್ದಾರೆ ಎಂದರು.
ಈ ಸಮ್ಮೇಳನದಲ್ಲಿ ಕೆನಡಾ, ಆಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳ ವಿದ್ವಾಂಸರು ಪಾಲ್ಗೊಂಡಿದ್ದರು. ಇನ್ನು ರಾಜೇಂದರ್ ಸಾಚಾರ್ ಈ ಹೇಳಿಕೆ ವಿರೋಧಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ಶಿಕ್ಷಕರು ಸಮ್ಮೇಳನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದರು.