ನವದೆಹಲಿ: ಮುಂಬರುವ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ಬಿಹಾರ ವಿಧಾನ ಸಭೆ ಚುನಾವಣೆ ವೇಳೆ ಮಾಡಿಕೊಂಡಿದ್ದ ಮಹಾ ಮೈತ್ರಿಯಂತೆ ಯು ಪಿ ಚುನಾವಣೆಯಲ್ಲಿ ಯಾವುದೇ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಇಂದು ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಾಂಗ್ರೆಸ್ ಸಚಿವರು, ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ರಾಜೀವ್ ಶುಕ್ಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಾಂಗ್ರೆಸ್ ನ ಎಲ್ಲಾ ಹಿರಿಯ ಮುಖಂಡರು ಮೈತ್ರಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.