ಸಭಾ ಸುದೀಪ್ ಬಂಡೋಪದ್ಯಾಯ (ಸಂಗ್ರಹ ಚಿತ್ರ) 
ದೇಶ

ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಅಸಹಿಷ್ಣುತೆ ವಿಷಯ ಪ್ರಸ್ತಾಪ: ಟಿಎಂಸಿ

ಮುಂದಿನ ವಾರ ಸಂಸತ್ ಚಳಿಗಾಲದ ಅಧಿವೇಶನದ ಆರಂಭವಾಗಲಿದ್ದು, ಈ ವೇಳೆ ಅಸಹಿಷ್ಟುತೆ ವಿಷಯ ಪ್ರಸ್ತಾಪ ಮಾಡುವುದಾಗಿ...

ನವದೆಹಲಿ: ಮುಂದಿನ ವಾರ ಸಂಸತ್ ಚಳಿಗಾಲದ ಅಧಿವೇಶನದ ಆರಂಭವಾಗಲಿದ್ದು, ಈ ವೇಳೆ ಅಸಹಿಷ್ಟುತೆ ವಿಷಯ ಪ್ರಸ್ತಾಪ ಮಾಡುವುದಾಗಿ ಶುಕ್ರವಾರ ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾವು ಸಹ ಕಲಾಪ ಸುಗಮವಾಗಿ ನಡೆಯಲಿ ಅಂತ ಬಯಸುತ್ತೇವೆ. ಕಲಾಪಕ್ಕೆ ಅಡ್ಡಿಪಡಿಸುವ ಉದ್ದೇಶ ಇಲ್ಲ. ಆದರೆ ಅಸಹಿಷ್ಣುತೆ, ಕೋಮುಗಲಭೆ ಮತ್ತು ಒಕ್ಕೂಟ ವ್ಯವಸ್ಥೆ ಬಲಿಸುವಂತ ವಿಷಯಗಳನ್ನು ನಾವು ಪ್ರಸ್ತಾಪಿಸುತ್ತೇವೆ ಎಂದು ಟಿಎಂಸಿ ಸಂಸದೀಯ ಪಕ್ಷದ ನಾಯಕ ಸಭಾ ಸುದೀಪ್ ಬಂಡೋಪದ್ಯಾಯ ಅವರು ಹೇಳಿದ್ದಾರೆ.

ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷದ ತಂತ್ರಗಳ ಬಗ್ಗೆ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಕಲಾಪ ಸುಗಮವಾಗಿ ನಡೆದರೆ, ಸದ್ಯದ ವಿಷಯಗಳಾದ ಬೆಲೆ ಏರಿಕೆ ಹಾಗೂ ಅಸಹಿಷ್ಣುತೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲಾಗುವುದು. ಇದಕ್ಕೆ ಉತ್ತರಿಸಲು ಸರ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಟಿಎಂಸಿ ನಾಯಕ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!