ಮದ್ಯ ನಿಷೇಧ ಮಾಡುವುದಕ್ಕೆ ಸರ್ಕಾರದಿಂದ ಶೀಘ್ರವೇ ಕ್ರಮ: ಬಿಹಾರ ಅಬಕಾರಿ ಸಚಿವ
ಮದ್ಯ ನಿಷೇಧ ಮಾಡುವುದಕ್ಕೆ ಬಿಹಾರ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಬಿಹಾರದ ಅಬಕಾರಿ ಸಚಿವ ಅಬ್ದುಲ್ ಜಲಿಲ್ ಮಸ್ತಾನ್ ಹೇಳಿದ್ದಾರೆ.
ಪಾಟ್ನಾ: ಮದ್ಯ ನಿಷೇಧ ಮಾಡುವುದಕ್ಕೆ ಬಿಹಾರ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಬಿಹಾರದ ಅಬಕಾರಿ ಸಚಿವ ಅಬ್ದುಲ್ ಜಲಿಲ್ ಮಸ್ತಾನ್ ಹೇಳಿದ್ದಾರೆ.
ಬಿಹಾರದಲ್ಲಿ ಜೆಡಿಯು ನೇತೃತ್ವದ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಅಬ್ದುಲ್ ಜಲಿಲ್ ಮಸ್ತಾನ್ ಅಬಕಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಮದ್ಯ ನಿಷೇಧಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮದ್ಯ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಳ್ಳಲಿರುವ ಕ್ರಮದ ಪರಿಣಾಮ ಆರು ತಿಂಗಳಲ್ಲಿ ಗೋಚರವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ನಿತೀಶ್ ಕುಮಾರ್ ಘೋಷಿಸಿದ್ದರು. ಬಿಹಾರದಲ್ಲಿರುವ ದಲಿತ ಮಹಿಳೆಯರು ಮದ್ಯ ನಿಷೇಧಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಮದ್ಯ ನಿಷೇಧ ಮಾಡುವುದಾಗಿ ಅಬ್ದುಲ್ ಜಲಿಲ್ ಮಸ್ತಾನ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.