ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ 
ದೇಶ

ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ: ಕೋರ್ಟ್‌ಗೆ ಸಿಬಿಐ

ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸೋಮವಾರ ಕೋರ್ಟ್‌ಗೆ ತಿಳಿಸಿದೆ.

ಮುಂಬೈ: ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸೋಮವಾರ ಕೋರ್ಟ್‌ಗೆ ತಿಳಿಸಿದೆ.

ಹಣಕಾಸಿನ ವ್ಯವಹಾರದ ಕುರಿತು ತನಿಖೆ ನಡೆಸಲು ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಪತಿ ಹಾಗೂ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿಯನ್ನು ಮತ್ತೆ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಮನವಿ ಮಾಡಿತು.

ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಇಮೇಲ್ ಚೆಕ್ ಮಾಡುತ್ತಿದ್ದ ಸಂದರ್ಭದಲ್ಲಿ ಪೀಟರ್ ಮುಖರ್ಜಿ ಇರುತ್ತಿದ್ದರು. ಈ ಕೊಲೆಗೆ ಹಣಕಾಸಿನ ವ್ಯವಹಾರ ಪ್ರಮುಖ ಕಾರಣವಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಪೀಟರ್ ಮುಖರ್ಜಿಯನ್ನು ಮತ್ತೆ 10ದಿನಗಳ ಕಾಲ ನಮ್ಮ ವಶಕ್ಕೆ ನೀಡವಂತೆ ಸಿಬಿಐ ಮನವಿ ಮಾಡಿತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಆರೋಪಿಯನ್ನು ಕೇವಲ 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

ಪೀಟರ್ ಮುಖರ್ಜಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದ ಸಿಬಿಐ ಕಳೆದ ಶುಕ್ರವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಶವ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈಗ ಅದು ನಿಜವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!