ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದ ಪಟೇಲ್ ಸಮುದಾಯ 
ದೇಶ

ಪಟೇಲರಿಗೆ ಮೀಸಲಾತಿ ನಿರಾಕರಿಸಿದ ಗುಜರಾತ್ ಮುಖ್ಯಮಂತ್ರಿ

ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್

ರಾಜ್ಕೋಟ್: ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್ ಸೋಮವಾರ ಘೋಷಿಸಿದ್ದಾರೆ.

ಆರು ಪುರಸಭೆಗಳಲ್ಲಿನ ಚುನಾವಣೆಗಳ ಮೊದಲ ಹಂತದ ಚುನಾವಣೆಯ ನಂತರ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಟೇಲ್ ಸಮುದಾಯ ನಾಯಕರು ಹಾರ್ದಿಕ್ ಪಟೇಲ್ ನಾಯಕತ್ವದಲ್ಲಿ ನಾಲ್ಕು ತಿಂಗಳುಗಳಿಂದ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಹಾರ್ದಿಕ್ ಪಟೇಲ್ ಅವರ ವಿರುದ್ಧ ದೇಶದ್ರೋಹದ ಆರೋಪ ಮಾಡಿ ಗುಜರಾತ್ ಸರ್ಕಾರ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿರ್ಧಿಷ್ಟವಾಗಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿರುವುದು. "ಕೆಲವ ೫% ಪಟೇಲ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿದ್ದಾರೆ. ಅವರಿಗೆ ಮೀಸಲಾತಿ ನೀಡುವ ಪ್ರಶ್ನೆಯೇ ಇಲ್ಲ. ಉಳಿದ ಸಮುದಾಯಗಳು ನರಳಲು ನಾವು ಅವಕಾಶ ನೀಡುವುದಿಲ್ಲ" ಎಂದು ಆನಂದಿಬೇನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT