ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ, 26 ವರ್ಷದ ತೇಜಸ್ವಿ ಯಾದವ್ ಅವರು ಸೋಮವಾರ ಬಿಹಾರದ ನೂತನ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಬಿಹಾರವನ್ನು ಒಂದು ಆಧುನಿಕ ರಾಜ್ಯವನ್ನಾಗಿ ನೋಡಲು ನಾವು ಭಯಸುತ್ತೇವೆ ಮತ್ತು ಆ ನಿಟ್ಟಿನಲ್ಲಿ ರಾಜ್ಯವನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.
ಲೋಕೋಪಯೋಗಿ ಸಚಿವರು ಆಗಿರುವ ಯಾದವ್ ಅವರು, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
'ನಾವು ಪ್ರಮಾಣಿಕವಾಗಿ ನಮ್ಮ ಕೆಲಸ ಮಾಡುತ್ತೇವೆ ಮತ್ತು ಯಾರೇ ಭ್ರಷ್ಟಾಚಾರದಲ್ಲಿ ತೊಡಗಿದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಲಾಲು ಪುತ್ರ ತಿಳಿಸಿದರು.