ಅರುಣ್ ಜೇಟ್ಲಿ 
ದೇಶ

ಜಿಎಸ್‍ಟಿ ಬದಲಿಗೆ ಸರ್ಕಾರ ಒಪ್ಪಿಗೆ?

ಸರಕು ಹಾಗೂ ಸೇವೆಗಳ ತೆರಿಗೆ (ಜಿಎಸ್‍ಟಿ) ವಿಧೇಯಕ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆನಡೆಯುತ್ತಿರುವ ತಿಕ್ಕಾಟಕ್ಕೆ ಸಂಸತ್ತಿನ...

ನವದೆಹಲಿ: ಸರಕು ಹಾಗೂ ಸೇವೆಗಳ ತೆರಿಗೆ (ಜಿಎಸ್‍ಟಿ) ವಿಧೇಯಕ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆನಡೆಯುತ್ತಿರುವ ತಿಕ್ಕಾಟಕ್ಕೆ ಸಂಸತ್ತಿನ ಚಳಿಗಾಲದ ಅಧಿವೇಶ ನಕ್ಕೂ ಮೊದಲೇ ಅಂತ್ಯ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜಿಎಸ್‍ಟಿ ವಿಧೇಯಕಕ್ಕೆ ಸಂಬಂಧಿಸಿ ಕಾಂಗ್ರೆಸ್ ನೀಡಿರುವ ಪ್ರಮುಖ ಬೇಡಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು `ಎನ್‍ಡಿಟಿವಿ' ವರದಿ ಮಾಡಿದೆ. ಜಿಎಸ್‍ಟಿ ವಿಧೇಯಕಕ್ಕೆ ಚಳಿಗಾಲದ ಅಧಿವೇಶನದಲ್ಲೇ ಒಪ್ಪಿಗೆ ಪಡೆಯಬೇಕೆಂಬುದು ಬಿಜೆಪಿ ಚಿಂತನೆ. ಆರ್ಥಿಕಸುಧಾರಣೆಗಳ ಪ್ರಮುಖ ಭಾಗವಾಗಿರುವ ಈ ವಿಧೇಯಕಕ್ಕೆ ಒಪ್ಪಿಗೆ ಪಡೆಯುವುದು ಸರ್ಕಾರಕ್ಕೆ  ಅನಿವಾರ್ಯ. ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣ್ಯನ್ ಹಣಕಾಸುಸಚಿವ ಅರುಣ್ ಜೇಟ್ಲಿ ಮತ್ತು ಕಂದಾಯ ಕಾರ್ಯ ದರ್ಶಿ ಹಸ್ಮುಖ್ ಮತ್ತಿತರ ಹಣಕಾಸು ಸಚಿವಾಲಯದ ಅಧಿಕಾರಿಗಳ ಮುಂದೆ ಜಿಎಸ್‍ಟಿ ದರ ಇಳಿಕೆ ಸಂಬಂಧ ಸರ್ಕಾರದ ಯೋಜನೆಯನ್ನು ಮಂಡಿಸಿದ್ದಾರೆ.
ಡಿಸೆಂಬರ್‍ನಲ್ಲಿ ಮಂಡನೆ : ರೆವೆನ್ಯೂ ನ್ಯೂಟ್ರಲ್ ಜಿಎಸ್‍ಟಿ ರೇಟ್‍ಗೆ ಸಂಬಂಧಿಸಿದ ಉನ್ನತ ಸಮಿತಿಯು ತನ್ನ ವರದಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ಸರ್ಕಾರಕ್ಕೆ
ಸಲ್ಲಿಸಲಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)