ಅಮೀರ್ ಖಾನ್ ರಾಯಭಾರಿಯಾಗಿ ಪ್ರತಿನಿಧಿಸುವ ಸಂಸ್ಥೆ ಸ್ನ್ಯಾಪ್ ಡೀಲ್ 
ದೇಶ

ಅಸಹಿಷ್ಣುತೆ ಹೇಳಿಕೆ: ಅಮೀರ್ ಖಾನ್ ರಾಯಭಾರಿತ್ವದ ಸ್ನ್ಯಾಪ್ ಡೀಲ್ ನ್ನು ತೆಗೆದು ಹಾಕಿದ 85 ಸಾವಿರ ಚಂದಾದಾರರು!

ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಬಾಲಿವುಡ್ ನಟ ಅಮೀರ್ ಖಾನ್ ನೀಡಿರುವ ಹೇಳಿಕೆ ಅವರು ರಾಯಭಾರಿಯಾಗಿ ಪ್ರತಿನಿಧಿಸುವ ಸಂಸ್ಥೆಯಗಳ ಮೇಲೂ ಪರಿಣಾಮ ಬೀರಿದೆ.

ಬೆಂಗಳೂರು: ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಬಾಲಿವುಡ್ ನಟ ಅಮೀರ್ ಖಾನ್ ನೀಡಿರುವ ಹೇಳಿಕೆ ಟೀಕೆಗಳಿಗಷ್ಟೇ ಗುರಿಯಾಗದೆ, ಅಮೀರ್ ಖಾನ್ ರಾಯಭಾರಿಯಾಗಿ ಪ್ರತಿನಿಧಿಸುವ ಸಂಸ್ಥೆಯ ಮೇಲೂ ಪರಿಣಾಮ ಬೀರಿದೆ.
ಅಮೀರ್ ಖಾನ್ ಹೇಳಿಕೆಯನ್ನು ಖಂಡಿಸಲು ಸಾಮಾಜಿಕ ಜಾಲತಾಣ ಬಳಸುವ ಜನರು ಹೊಸ ವಿಧಾನ ಅನುಸರಿಸುತ್ತಿದ್ದು,  ಅಮೀರ್ ಖಾನ್ ರಾಯಭಾರಿಯಾಗಿರುವ ಇ-ಕಾಮರ್ಸ್ ಸಂಸ್ಥೆ ಸ್ನ್ಯಾಪ್ ಡೀಲ್. ಕಾಂ ನ ಆಪ್ ಗಳನ್ನು ಮೊಬೈಲ್ ನಿಂದ ತೆಗೆದುಹಾಕುತ್ತಿದ್ದಾರೆ. ಈ  ವರೆಗು ಅಂದಾಜು 85 ,000 ಜನರು ತಮ್ಮ ಮೊಬೈಲ್ ನಿಂದ ಸ್ನ್ಯಾಪ್ ಡೀಲ್.ಕಾಂ ಆಪ್ ನ್ನು ಅನ್ ಇನ್ಸ್ಟಾಲ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಆಪ್ ಗೆ 5 ಸ್ಟಾರ್ ರೇಟಿಂಗ್ ನೀಡಿದ್ದ ಗ್ರಾಹಕರೂ ಸಹ ಅಮೀರ್ ಖಾನ್ ರಾಯಭಾರಿಯಾಗಿರುವ ಸ್ನ್ಯಾಪ್ ಡೀಲ್ ಆಪ್ ನ್ನು ಮೊಬೈಲ್ ನಿಂದ ತೆಗೆದುಹಾಕುತ್ತಿದ್ದಾರೆ. ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿದ್ದ ಅಮೀರ್ ಖಾನ್ ಅವರನ್ನು ರಾಯಭಾರಿತ್ವದಿಂದ ಕೈಬಿಡುವವರೆಗೂ ಸ್ನ್ಯಾಪ್ ಡೀಲ್ ಮೂಲಕ ಯಾವುದೇ ವಸ್ತುಗಳನ್ನು ಖರೀದಿಸುವುದಿಲ್ಲ ಎಂದು ಅಮೀರ್ ಖಾನ್ ಹೇಳಿಕೆಯನ್ನು ವಿರೋಧಿಸುತ್ತಿರುವ ಸಾಮಾಜಿಕ ಜಾಲತಾಣದ ಜನರು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT