ತಮಿಳುನಾಡಿನಲ್ಲಿ ಮುಂದುವರೆದ ಭಾರೀ ಮಳೆ: 176 ಬಲಿ 
ದೇಶ

ತಮಿಳುನಾಡಿನಲ್ಲಿ ಮುಂದುವರೆದ ಭಾರೀ ಮಳೆ: 176 ಬಲಿ

ತಮಿಳುನಾಡಿನಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಮಳೆ ಸಂಬಂಧಿತ ಘಟನೆಯಲ್ಲಿ ಸುಮಾರು 176ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ...

ಚೆನ್ನೈ: ತಮಿಳುನಾಡಿನಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಮಳೆ ಸಂಬಂಧಿತ ಘಟನೆಯಲ್ಲಿ ಸುಮಾರು 176ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಳೆದ ಎರಡು ವಾರಗಳಿಂದಲೂ ತಮಿಳುನಾಡಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಇಂದು ಸಹ ತಮಿಳುನಾಡಿನಾದ್ಯಂತ ಮಳೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಮುಂದಿನ 24 ರಿಂದ 48 ಗಂಟೆಗಳ ಕಾಲ ಇನ್ನಷ್ಟು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಕಳೆದೆರಡು ದಿನಗಳಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡು, ಪುದುಚೆರಿ, ಕರ್ನಾಟಕದ ಕರಾವಳಿ ತೀರ ಪ್ರದೇಶ, ಕೇರಳ ಹಾಗೂ ಲಕ್ಷ ದ್ವೀಪ ಮತ್ತಿತರ ಸ್ಥಳಗಲ್ಲಿ ಗುಡುಗು- ಸಿಡಿಲು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಿರುನವೇಲಿ ಜಿಲ್ಲೆಯ ಪಾಪನಾಶಂನಲ್ಲಿ 10 ಸೆ.ಮೀ ಮಳೆ ಸುರಿದಿದ್ದು, ಚರಣಮಹಾದೇವಿ, ರಾಮೇಶ್ವರಂ, ಕುನೂರ್ ಗಳಲ್ಲಿ 1 ಸೆಂ.ಮೀ. ಮಳೆಯಾಗಿದೆ. ಚೆನ್ನೈನ ಸುತ್ತಮುತ್ತಲಿರುವ ನೆರೆ ಪ್ರದೇಶಗಳಲ್ಲಿ ಇದೀಗ ಮೋಡ ಕವಿದ ವಾತಾವರಣವಿದ್ದು ಭಾರೀ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ಮಳೆಯ ಆರ್ಭಟಕ್ಕೆ ಕಳೆದೆರಡು ದಿನಗಳಲ್ಲಿ ಸಾವನ್ನಪ್ಪಿದ 7 ಮಂದಿ ಕುರಿತಂತೆ ಈಗಾಗಲೇ ಸಂತಾಪ ಸೂಚಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ರು.4 ಲಕ್ಷ ಪರಿಹಾರ ಧನವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!