ಅಮೀರ್ ಖಾನ್ 
ದೇಶ

ಅಸಹಿಷ್ಣುತೆ ಹೇಳಿಕೆ: ಅಮೀರ್ ಖಾನ್ ವಿರುದ್ಧ ರಾಷ್ಟ್ರದ್ರೋಹದ ಆರೋಪದ ಅಡಿ ಮೊಕದ್ದಮೆ ದಾಖಲು

ಭಾರತದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ವಿರುದ್ಧ ಖಾನ್ ಪುರ ಸೆಷನ್ಸ್ ಕೋರ್ಟ್ ನಲ್ಲಿ ರಾಷ್ಟ್ರಧ್ರೋಹದ ಆರೋಪದ ಅಡಿ ಮೊಕದ್ದಮೆ ದಾಖಲಿಸಲಾಗಿದೆ.

ನವದೆಹಲಿ: ಭಾರತದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ವಿರುದ್ಧ ಖಾನ್ ಪುರ ಸೆಷನ್ಸ್ ಕೋರ್ಟ್ ನಲ್ಲಿ ರಾಷ್ಟ್ರದ್ರೋಹದ ಆರೋಪದ ಅಡಿ ಮೊಕದ್ದಮೆ ದಾಖಲಿಸಲಾಗಿದೆ.
ಅರ್ಜಿ ವಿಚಾರಣೆ ಡಿ.1 ಕ್ಕೆ ನಡೆಯಲಿದೆ. ಪ್ರಕರಣ ದಾಖಲಿಸಿರುವ ಅಡ್ವೊಕೇಟ್ ಮನೋಜ್ ಕುಮಾರ್ ದೀಕ್ಷಿತ್, ಅಮೀರ್ ಖಾನ್ ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವುದು ರಾಷ್ಟ್ರದ್ರೋಹದ ಅಪರಾಧದ ವ್ಯಾಪ್ತಿಗೆ ಬರಲಿದೆ ಎಂದು ಹೇಳಿದ್ದಾರೆ.  ಐಪಿಸಿ ಸೆಕ್ಷನ್ 124 (ಎ)(ರಾಷ್ಟ್ರ ಧ್ರೋಹ) 153 ಎ (ಎರಡು ಗುಂಪುಗಳ ನಡುವೆ ಧಾರ್ಮಿಕ ನೆಲೆಯಲ್ಲಿ ದ್ವೇಷ ಭಾವನೆ ಕೆರಳಿಸುವುದು) ರ ಅಡಿಯಲ್ಲಿ ಅಮೀರ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ಎಂಟು ತಿಂಗಳಿನಿಂದ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಅಮೀರ್ ಖಾನ್ ಹೇಳಿಕೆ ನೀಡಿದ್ದರು. ಅಮೀರ್ ಖಾನ್ ಹೇಳಿಕೆಗೆ ಟೀಕೆ ಹಾಗೆಯೇ ಬೆಂಬಲವೂ ವ್ಯಕ್ತವಾಗುತ್ತಿದ್ದು, ಈಗ ಬಾಲಿವುಡ್ ನಟನ ವಿರುದ್ಧ ರಾಷ್ಟ್ರದ್ರೋಹದ ಆರೋಪದ ಅಡಿ ಮೊಕದ್ದಮೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT