ಮಾಜಿ ಸಚಿವ ಮದನ್ ಮಿತ್ರಾ (ಸಂಗ್ರಹ ಚಿತ್ರ) 
ದೇಶ

ಶಾರದಾ ಚಿಟ್ ಫಂಡ್ ಹಗರಣ: ಮದನ್ ಮಿತ್ರಾ ಬೇರೆ ರಾಜ್ಯಕ್ಕೆ ವರ್ಗಾವಣೆ ಸಾಧ್ಯತೆ

ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಮದನ್ ಮಿತ್ರಾ ಅವರು ಬೇರೆ ರಾಜ್ಯಕ್ಕೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಕೋಲ್ಕತಾ: ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಮದನ್ ಮಿತ್ರಾ ಅವರು ಬೇರೆ ರಾಜ್ಯಕ್ಕೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಶಾರದಾ ಚಿಟ್ ಫಂಡ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡುವ ಬಗ್ಗೆ ಈಗಾಗಲೇ ಚರ್ಚೆ ನಡೆಸಲಾಗುತ್ತಿದ್ದು, ಈ ಬಗ್ಗೆ ಈ ವರೆಗೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸಿಬಿಐನ ಉನ್ನತ ಮೂಲಗಳು ತಿಳಿಸಿವೆ.

ಈ ಹಿಂದೆ ಸಿಬಿಐ ಅಧಿಕಾರಿಗಳು ಮದನ್ ಮಿತ್ರಾ ಓರ್ವ ಪ್ರಭಾವಿ ವ್ಯಕ್ತಿಯಾಗಿದ್ದು, ಹಗರಣದಲ್ಲಿ ಪಾರಾಗುವ ಸಂಭವವಿದೆ. ಹೀಗಾಗಿ ಮದನ್ ಮಿತ್ರಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ಅಧಿಕಾರಿಗಳ ಮನವಿಯನ್ನು ಸ್ವೀಕರಿಸಿರುವ ಕೋಲ್ಕತಾ ನ್ಯಾಯಾಲಯವು ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಆ.6 ರಂದು ಮದನ್ ಮಿತ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಒಳಸಂಚು, ಅಧಿಕಾರ ದುರುಪಯೋಗ, ಹಣ ಹೂಡಿಕೆ ಮುಂತಾದ ಮೇಲ್ನೋಟ ವಿಚಾರಗಳಿಗೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು 2014ರ ಡಿಸೆಂಬರ್ ತಿಂಗಳಲ್ಲಿ ಸಿಬಿಐ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT