ನವದೆಹಲಿ: ರೈತರ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಬಗ್ಗೆ ಹೈದರಾಬಾದ್ ಹೈಕೋರ್ಟ್ ಗೆ ಮಾಹಿತಿ ನೀಡಿರುವ ತೆಲಂಗಾಣ ಸರ್ಕಾರ, ರೈತರು ಅದ್ಧೂರಿ ಮಾಡುವೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅತಿ ಹೆಚ್ಚು ಹಣ ಖರ್ಚು ಮಾಡುತ್ತಿರುವುದು ಆತ್ಮಹತ್ಯೆಗೆ ಕಾರಣ ಎಂದು ಹೇಳಿದೆ.
ರೈತರ ಹಿತರಕ್ಷಣೆ ವಿಷಯದಲ್ಲಿ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಿಂದ ರೈತರನ್ನು ಹೊರತರಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತೆಲಂಗಾಣ ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ.
ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ, ವ್ಯವಸಾಯ ಜನ ಚೈತನ್ಯ ಸಮಿತಿ ಹೈದರಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಗೆ ಪ್ರತಿಯಾಗಿ ತೆಲಂಗಾಣ ಸರ್ಕಾರವ್ ಅಫಿಡವಿಟ್ ಸಲ್ಲಿಸಿದ್ದು, ಕೃಷಿಕರ ಹಿತದೃಷ್ಟಿಯಿಂದ ಎಂಎಸ್ ಸ್ವಾಮಿನಾಥನ್ ಸಮಿತಿ ವರದಿಯ ಶಿಫಾರಸುಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದೆ.