ಡಿ.ವಿ ಸದಾನಂದಗೌಡ 
ದೇಶ

ಸದಾನಂದಗೌಡ ವಿರುದ್ಧ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ

ಡಿವಿ ಸದಾನಂದ ಗೌಡ ಅವರಿಗೆ ಬೆಂಗಳೂರಿನಲ್ಲಿ ಮನೆ ನಿರ್ಮಿಸಲು ನೀಡಲಾಗಿದ್ದ ಅನುಮತಿಯನ್ನು ರದ್ದು ಪಡಿಸಿ 2012ರಲ್ಲಿ ಕರ್ನಾಟಕ ಹೈಕೊರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೊರ್ಟ್ ತಳ್ಳಿಹಾಕಿದೆ...

ನವದೆಹಲಿ: ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ಅವರಿಗೆ ಬೆಂಗಳೂರಿನಲ್ಲಿ ಮನೆ ನಿರ್ಮಿಸಲು ನೀಡಲಾಗಿದ್ದ ಅನುಮತಿಯನ್ನು ರದ್ದು ಪಡಿಸಿ 2012ರಲ್ಲಿ ಕರ್ನಾಟಕ ಹೈಕೊರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೊರ್ಟ್ ತಳ್ಳಿಹಾಕಿದೆ.

ಹೈಕೊರ್ಟ್ ತೀರ್ಪನ್ನು ಪ್ರಶ್ನಿಸಿ ಸದಾನಂದ ಗೌಡ ಅವರು ಸಲ್ಲಿಸಿದ್ದ ಮೇಲ್ಮನವಿ ಮೇಲಿನ ತೀರ್ಪನ್ನು ವಿಚಾರಣೆಯ ಬಳಿಕ ಸುಪ್ರೀಂಕೊರ್ಟ್​ನ ನ್ಯಾಯಮೂರ್ತಿ ಮದನ್ ಬಿ. ಲೊಕೂರ್ ಮತ್ತು ನ್ಯಾಯಮೂರ್ತಿ ಎಸ್​ಎ ಬೊಬ್ಡೆ ಅವರನ್ನು ಒಳಗೊಂಡ ಪೀಠವು ಅಕ್ಟೊಬರ್ 29ರಂದು ಕಾಯ್ದಿರಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠ ಸದಾನಂದಗೌಡ ಅವರು ಮನೆ ನಿರ್ಮಿಸಿರುವುದು ಸರಿ ಇದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಸದಾನಂದಗೌಡ ಅವರು ಐದು ಅಂತಸ್ತಿನ ಕಟ್ಟಡವನ್ನು ನಿಯಮಾವಳಿಗಳನ್ನು ಉಲ್ಲಂಘಿಸಿ ನಿರ್ಮಿಸಿದ್ದಾರೆ ಎಂದು ಹೇಳಿ ಕರ್ನಾಟಕ ಹೈಕೊರ್ಟ್ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದು ಪಡಿಸಿ 2012ರಲ್ಲಿ ತೀರ್ಪು ನೀಡಿತ್ತು. ಹೈಕೊರ್ಟ್ ತೀರ್ಪಿನ ವಿರುದ್ಧ ಸದಾನಂದ ಗೌಡ ಮತ್ತು ಮಾಜಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಡಿಎನ್. ಜೀವರಾಜ್ ಮೇಲ್ಮನವಿ ಸಲ್ಲಿಸಿದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!