ಸಾಂದರ್ಭಿಕ ಚಿತ್ರ 
ದೇಶ

9ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಅತ್ಯಾಚಾರ: ಶಾಲಾ ಶಿಕ್ಷಕನ ಬಂಧನ

ಕಮ್ಮಂ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರನ್ನು...

ನಲಗೊಂಡ: ಕಮ್ಮಂ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರನ್ನು ಗುರುವಾರ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

ಸೂರ್ಯಪೇಟ್ ನಗರದ ಲಾಡ್ಜ್ವೊಂದರಲ್ಲಿ ತಂಗಿದ್ದ ಕಮ್ಮಂ ಜಿಲ್ಲೆಯ ಕುಸುಮಾಂಚಿ ಮಂಡಲದ ನೆಲ್ಪಟ್ಲ ಝಡ್ಪಿಎಚ್ಎಸ್ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕನಾಗಿ ಕೆಲಸ ನಾಡುತ್ತಿದ್ದ ಎನ್.ನಾಗೇಶ್ವರ ರಾವ್ನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ನಾಗೇಶ್ವರ್ ರಾವ್ ಪ್ರೀತಿಸುವುದಾಗಿ ಹೇಳಿ ಎರಡು ದಿನಗಳ ಹಿಂದೆ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಲಾಡ್ಜ್ನಲ್ಲಿ ತಂಗಿದ್ದ. ಈ ವೇಳೆ ಶಿಕ್ಷಕ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಬಾಲಕಿ ಶಾಲೆಯಿಂದ ಮನೆಗೆ ಬಾರದಿದ್ದಾಗ ಪೋಷಕರು ಕುಸುಮಾಂಚಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿ ಮತ್ತು ಶಿಕ್ಷಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಶಿಕ್ಷಕನ ವಿರುದ್ಧ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ