ಸುಪ್ರೀಂ ಕೋರ್ಟ್ (ಸಂಗ್ರಹಚಿತ್ರ) 
ದೇಶ

ವಕೀಲರಿಗೆ ಪ್ರತಿಭಟನೆ-ಧರಣಿ ಮಾಡುವ ಹಕ್ಕಿಲ್ಲ: ಸುಪ್ರೀಂ ಕೋರ್ಟ್

ನ್ಯಾಯವಾದಿಗಳಿಗೆ ಧರಣಿ ಅಥವಾ ಪ್ರತಿಭಟನೆ ಮಾಡುವ ಯಾವುದೇ ಅಧಿಕಾರ ಇಲ್ಲ ಎಂದು ಭಾರತದ ಸರ್ವೋಚ್ಛ ನ್ಯಾಯಾಲಯ ಹೇಳಿದೆ...

ನವದೆಹಲಿ: ನ್ಯಾಯವಾದಿಗಳಿಗೆ ಧರಣಿ ಅಥವಾ ಪ್ರತಿಭಟನೆ ಮಾಡುವ ಯಾವುದೇ ಅಧಿಕಾರ ಇಲ್ಲ ಎಂದು ಭಾರತದ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಇತ್ತೀಚಿಗೆ ನಡೆದ ವಕೀಲರ ಧರಣಿಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್ ಮತ್ತು ಅರುಣ್ ಮಿಶ್ರಾ ನೇತೃತ್ವದ ಪೀಠ, ವಕೀಲರಿಗೆ ಧರಣಿ ಅಥವಾ ಪ್ರತಿಭಟನೆ ನಡೆಸುವ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದೆ.

"ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಕೀಲರ ಸಂಘ ಕೆಲಸ ಮಾಡಬೇಕು. ನ್ಯಾಯವಾದಿಗಳು ಕೂಡ ತಮ್ಮ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿಕೊಳ್ಳಲು ಮುಂದಾಗಬೇಕು. ಅದನ್ನು ಬಿಟ್ಟು ತಮ್ಮ ಬೇಡಿಕೆ ಈಡೇರಿಕೆಗಾಗಿ ಧರಣಿ ನಡೆಸುವುದು ಇಲ್ಲವೆ ಪ್ರತಿಭಟನೆ ನಡೆಸುವುದು ನ್ಯಾಯ ಸಮ್ಮತವಲ್ಲ. ಇದರಿಂದಾಗಿ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಯಾಗುತ್ತದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕಾಲದಲ್ಲಿ ಧರಣಿ ಮತ್ತು ಪ್ರತಿಭಟನೆಯನ್ನು ಕಠಿಣ ಪರಿಸ್ಥಿತಿಯಲ್ಲಿ ಮಾತ್ರ ಬಳಕೆ ಮಾಡಲಾಗುತ್ತಿತ್ತು. ಆದರೀಗ ಪ್ರತಿಯೊಬ್ಬರೂ ಸಣ್ಣ ವಿಚಾರಗಳಿಗೂ ಪ್ರತಿಭಟನೆ ಮತ್ತು ಧರಣಿಯ ಹಾದಿ ತುಳಿಯುತ್ತಿದ್ದಾರೆ. ನನ್ನ ವೈಯುಕ್ತಿಕ ಅಭಿಪ್ರಾಯದಲ್ಲಿ ಹೇಳಬೇಕು ಎಂದರೆ ವಕೀಲರಿಗೆ ಪ್ರತಿಭಟನೆ ಮಾಡುವ ಹಕ್ಕಿಲ್ಲ ನ್ಯಾಯಮೂರ್ತಿ ಜೋಸೆಫ್ ಹೇಳಿದರು. ಅದಕ್ಕೆ ಮತ್ತೊಬ್ಬ ನ್ಯಾಯಮೂರ್ತಿ ಮಿಶ್ರಾ ಕೂಡ ಧನಿಗೂಡಿಸಿದರು.

"ವಕೀಲರು ಪ್ರತಿಭಟನೆ ನಡೆಸಿದರೆ ಕಕ್ಷಿದಾರರಿಗೆ ಮತ್ತು ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಹೀಗಾಗಿ ವಕೀಲರು ಸ್ವಯಂ ಶಿಸ್ತು ಅಳವಡಿಸಿಕೊಳ್ಳಬೇಕಾಗಿದೆ. ವಕೀಲರ ಸಮಸ್ಯೆಗಳನ್ನು ಕುಳಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಅಲ್ಲದೆ ಭಾರತೀಯ ಬಾರ್ ಕೌನ್ಸಿಲ್ ಕೂಡ ವಕೀಲರು ಪ್ರತಿಭಟನೆಗೆ ಹೋಗದಂತೆ ನೀತಿಯನ್ನು ಜಾರಿಗೆ ತರಬೇಕು ಎಂದು ನ್ಯಾಯಪೀಠ ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ