ಎನ್ ಕೌಂಟರ್ 
ದೇಶ

ಹರ್ಯಾಣದಲ್ಲಿ ಗೋವುಗಳ ಕಳ್ಳಸಾಗಣೆ: ಎನ್ ಕೌಂಟರ್ ನಲ್ಲಿ ಓರ್ವನ ಹತ್ಯೆ

ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಹರ್ಯಾಣ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

ಚಂಡೀಘಢ: ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಹರ್ಯಾಣ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.
ಚತ್ತೀಸ್ ಘಡದ ಥಾನೆಸರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಪಿಕ್-ಅಪ್-ಜೀಪ್ ನಲ್ಲಿ ಗೋವುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಳ್ಳಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆಯಲು ಹೋದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆದಿದ್ದು ಪೊಲೀಸರು ಕಳ್ಳಸಾಗಣೆ ಮಾಡುತ್ತಿದ್ದವರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದರೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ಕುರುಕ್ಷೇತ್ರ ಜಿಲ್ಲೆ ಪೊಲೀಸ್ ಮುಖ್ಯಸ್ಥ ಸಿಮರ್ದೀಪ್ ಸಿಂಗ್ ಹೇಳಿದ್ದಾರೆ.
ಕನಿಷ್ಠ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಹರ್ಯಾಣ ಸರ್ಕಾರ ಗೋವು ಸಂರಕ್ಷಣ್ ಹಾಗೂ ಗೋವು ಸಂವರ್ಧನ್ ಕಾಯ್ದೆಯನ್ನು ಜಾರಿಗೆ ತಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT