ಕಟಾರಿ ಅನುರಾಧಾ 
ದೇಶ

ಚಿತ್ತೂರ್ ಮೇಯರ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಕೋರ್ಟ್ ಗೆ ಶರಣು

ಚಿತ್ತೂರ್ ಮೇಯರ್ ಕಟಾರಿ ಅನುರಾಧಾ ಹಾಗೂ ಅವರ ಪತಿ ಕೆ. ಮೋಹನ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚಂದ್ರಶೇಖರ್ ಅಲಿಯಾಸ್ ಚಿಂಟೂ...

ಚಿತ್ತೂರ್: ಚಿತ್ತೂರ್ ಮೇಯರ್ ಕಟಾರಿ ಅನುರಾಧಾ ಹಾಗೂ ಅವರ ಪತಿ ಕೆ. ಮೋಹನ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚಂದ್ರಶೇಖರ್ ಅಲಿಯಾಸ್ ಚಿಂಟೂ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಚಿತ್ತೂರು ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಮುಂದೆ ಶರಣಾದ ಚಿಂಟೂನನ್ನು 14 ದಿನಗಳ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಚಿಂಟೂ ಇಂದು ಕೋರ್ಟ್ ಗೆ ಶರಣಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ವಿಚಾರಣೆಗಾಗಿ ನಮ್ಮ ವಶಕ್ಕೆ ನೀಡವಂತೆ ನಾವು ಮನವಿ ಸಲ್ಲಿಸಿದ ನಂತರ ಕೋರ್ಟ್ 14 ದಿನಗಳ ಕಾಲ ನಮ್ಮ ವಶಕ್ಕೆ ನೀಡಿದೆ ಎಂದು ಚಿತ್ತೂರ್ ಪೊಲೀಸ್ ವರಿಷ್ಠಾಧಿಕಾರಿ ಜಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಇದೇ ವೇಳೆ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಚಿಂಟೂ ಬಂಟರಾದ ಮುರುಗಾ, ಮಂಜುನಾಥ್ ಹಾಗೂ ವೆಂಕಟೇಶ್ ಅವರನ್ನೂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಟಾರಿ ಅನುರಾಧಾ ಅವರ ಕೊಲೆ ನಡೆದ ದಿನವೇ ತಲೆಮರೆಸಿಕೊಂಡಿದ್ದ ಚಿಂಟೂ, ಕೊಲೆಯಲ್ಲಿ ತನ್ನ ಪಾತ್ರ ಇಲ್ಲ ಎಂದು ವಾದಿಸುತ್ತಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ