ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಸಹಿಷ್ಣುತೆ ಚರ್ಚೆ ಜನರ ಮನ ನೋಯಿಸಲಿದೆ: ಸಮಾಜವಾದಿ ಪಕ್ಷ

ಬಹು ವಿವಾದಿತ ಅಸಹಿಷ್ಣುತೆ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವುದು ಜನರ ಮನಸ್ಸಿಗೆ ನೋವುಂಟು ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷ ಸೋಮವಾರ ಹೇಳಿದೆ...

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ (ಸಂಗ್ರಹ ಚಿತ್ರ)
Srinivasa Murthy VN
Updated On : 30 Nov 2015, 12:30 pm

ನವದೆಹಲಿ: ಬಹು ವಿವಾದಿತ ಅಸಹಿಷ್ಣುತೆ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವುದು ಜನರ ಮನಸ್ಸಿಗೆ ನೋವುಂಟು ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷ ಸೋಮವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಅವರು, ಅಸಹಿಷ್ಣುತೆಯುತ ವಿಷಯಗಳು ಸಂಸತ್ತಿನಲ್ಲಿ ಹೆಚ್ಚು ಚರ್ಚೆಯಾಗುವುದರಿಂದ ಇದು ಜನರ ಮೇಲೆ ಪರಿಣಾಮ ಬೀರಲಿದ್ದು, ದೇಶದ ಜನತೆಗೆ ನೋವುಂಟು ಮಾಡಲಿದೆ ಎಂದು ಹೇಳಿದ್ದಾರೆ.

ಭಾರತ ಪ್ರಪಂಚದಲ್ಲಿಯೇ ಅತೀ ಹೆಚ್ಚು ಅಸಹಿಷ್ಣುತೆ ಇರುವ ದೇಶದವಾಗಿದ್ದು, ವಿಷಯಗಳಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿ ದೊಡ್ಡದು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಸಹಿಷ್ಣುತೆ ವಿಷಯ ಅತೀ ಹೆಚ್ಚು ವಿವಾದಕ್ಕೀಡಾಗುತ್ತಿದ್ದು, ಅಸಹಿಷ್ಣುತೆ ಕುರಿತಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿವೆ. ಹೀಗಾಗಿ ಅಸಹಿಷ್ಣುತೆ ಕುರಿತ ವಿಚಾರ ಇಂದು ಲೋಕಸಭೆಯಲ್ಲಿ ಚರ್ಚೆಯಾಗುತ್ತಿದ್ದು, ಪ್ರತಿಪಕ್ಷಗಳು ಎನ್ ಡಿಎ ಸರ್ಕಾರದ ವಿರುದ್ಧ ಕಿಡಿಕಾರುತ್ತಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments