ಗಾಂಧೀಜಿಯವರ ಸಂದೇಶ ಮಾರ್ಗದರ್ಶಕ:ರಾಹುಲ್ ಗಾಂಧಿ
ಮಹಾತ್ಮಾ ಗಾಂಧೀಜಿಯವರ ಸಹಾನುಭೂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂದೇಶಗಳು ನಮ್ಮ ರಾಷ್ಟ್ರಕ್ಕೆ...
ನವದೆಹಲಿ: ಮಹಾತ್ಮಾ ಗಾಂಧೀಜಿಯವರ ಸಹಾನುಭೂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂದೇಶಗಳು ನಮ್ಮ ರಾಷ್ಟ್ರಕ್ಕೆ ಮಾರ್ಗದರ್ಶನವಾಗಬಹುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು 146ನೇ ವರ್ಷದ ಗಾಂಧಿ ಜಯಂತಿ ಅಂಗವಾಗಿ ಟ್ವೀಟ್ ಮಾಡಿರುವ ಅವರು, ಗಾಂಧಿ ಜಯಂತಿಯಂದು ಬಾಪೂ ಅವರನ್ನು ಸ್ಮರಿಸುತ್ತೇವೆ. ಅವರು ಸಹಾನುಭೂತಿ, ಸಹಿಷ್ಣುತೆ ಮತ್ತು ಸಾಮರಸ್ಯ ಕುರಿತು ನೀಡಿರುವ ಸಂದೇಶಗಳು ವೈಯಕ್ತಿಕವಾಗಿ ಮತ್ತು ಇಡೀ ದೇಶಕ್ಕೆ ಮಾದರಿ ಎಂದು ಬರೆದಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಗೌರವ ನಮನ ಸಲ್ಲಿಸಿದರು.
ಇಂದು ದೇಶಾದ್ಯಂತ ಮೋಹನ್ ದಾಸ್ ಕರಮಚಂದ ಗಾಂಧಿಯವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. 1869, ಅಕ್ಟೋಬರ್ 2ರಂದು ಗುಜರಾತ್ ನ ಪಾಟಲೀಪುತ್ರದಲ್ಲಿ ಕರಮಚಂದ ಗಾಂಧಿ ಜನಿಸಿದರು. ಅವರ ಹುಟ್ಟುಹಬ್ಬವನ್ನು ಅಹಿಂಸಾ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.