ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗುಂಡು ಹಾರಿಸಿಕೊಂಡ ಯುವಕ

ಜನಜಂಗುಳಿ ಇರುವ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರಾಜೀವ್ ಚೌಕ್...

ನವದೆಹಲಿ: ಜನಜಂಗುಳಿ ಇರುವ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ರಾತ್ರಿ  ನಡೆದಿದೆ.

22 ವರ್ಷದ ಯುವಕನೊಬ್ಬ ತನ್ನಷ್ಟಕ್ಕೆ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗುಂಡು ಅವನ ಭುಜಕ್ಕೆ ತಗುಲಿದ್ದು, ಕೂಡಲೇ ಆತನನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜೀವ್ ಚೌಕ್ ನಲ್ಲಿ ಇಳಿದ ವ್ಯಕ್ತಿಯು ಫ್ಲಾಟ್ ಫಾರಂ 3ರಲ್ಲಿ ಟಿಕೆಟ್ ಕೌಂಟರ್ ಬಳಿಯೇ ತನ್ನ ಭುಜಕ್ಕೆ ಶೂಟ್ ಮಾಡಿಕೊಂಡನೆಂದು ಮೆಟ್ರೊ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊತ್ತ ಸಿ ಐ ಎಸ್ ಎಫ್ ಸಿಬ್ಬಂದಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಫತೇಪುರ್ ನಿವಾಸಿ ಶಿಬೀಶ್ ಆತ್ಮಹತ್ಯೆಗೆ ಯತ್ನಿಸಿದವ.
ಘಟನೆ ಕುರಿತು ತನಿಖೆ ಕೈಗೊಂಡಿರುವ ಸಿಐಎಸ್ ಎಫ್ ಸಿಸಿಟಿವಿ ಫೂಟೇಜ್ ಪಡೆದುಕೊಂಡಿದೆ. ಸಿಸಿಟಿವಿ ಫೂಟೇಜ್ ನ್ನು ಗಮನಸಿದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ