ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್‌ಘಾಟ್‌ನಲ್ಲಿ ಮಹಾತ್ಮಗಾಂಧಿಗೆ ಪ್ರಧಾನಿ ನಮನ

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 146ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮನಿಗೆ...

ನರೇಂದ್ರ ಮೋದಿ
Lingaraj Badiger
Updated On : 2 Oct 2015, 12:49 pm

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 146ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮನಿಗೆ ನಮನ ಸಲ್ಲಿಸಿದರು.

ಈ ವೇಳೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಕೇಂದ್ರ ನಗರಾಭಿವೃದ್ದಿ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಮಹಾತ್ಮ ಗಾಂಧಿ ಅವರ 'ಸ್ವಚ್ಛ ಭಾರತ' ಕನಸನ್ನು ಈಡೇರಿಸಬೇಕು. ಸ್ವಚ್ಛತೆ ಮಹಾತ್ಮ ಗಾಂಧಿಯವರ ಹೃದಯಕ್ಕೆ ಹತ್ತಿರವಾದದ್ದು, ಸ್ವಚ್ಛ ಭಾರತ ನಿರ್ಮಾಣಕ್ಕೆ ಬದ್ಧರಾಗೋಣ ಮತ್ತು ಅವರ ಬಾಪು ಕನಸನ್ನು ನನಸು ಮಾಡೋಣ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ವಿಶ್ವದಾದ್ಯಂತ ಭಾರತೀಯರು ಇಂದು ಮಹಾತ್ಮ ಗಾಂಧಿ ಅವರ 146ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಅಲ್ಲದೆ ಅಕ್ಟೋಬರ್ 2 ಅಂತಾರಾಷ್ಟ್ರೀಯ ಅಹಿಂಸಾ ದಿನ ಎಂದು ಆಚರಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments