ಇಂದ್ರಾಣಿ ಮುಖರ್ಜಿ 
ದೇಶ

ಇಂದ್ರಾಣಿ ಮುಖರ್ಜಿಯನ್ನು ಭೇಟಿ ಮಾಡಲು ವಕೀಲರಿಗೆ ಅನುಮತಿ ನಿರಾಕರಣೆ

ಅಧಿಕ ಪ್ರಮಾಣದ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಆಕೆಯ ಪರ ವಕೀಲರಿಗೆ ಅವಕಾಶ ನಿರಾಕರಿಸಲಾಗಿದೆ.

ಮುಂಬೈ: ಅಧಿಕ ಪ್ರಮಾಣದ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಆಕೆಯ ಪರ ವಕೀಲರಿಗೆ ಅವಕಾಶ ನಿರಾಕರಿಸಲಾಗಿದೆ.
ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಅವರ ಪರ ವಕೀಲರಾದ ಗುಂಜನ್ ಮಂಗಳಾ ಅವರು ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಜೆಜೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆದರೆ ಇಂದ್ರಾಣಿ ಮುಖರ್ಜಿ ಅರೆಪ್ರಜ್ಞಾವಸ್ಥೆಯಲ್ಲಿರುವುದರಿಂದ ಅವರನ್ನು ಭೇಟಿ ಮಾಡಲು ವಕೀಲರಿಗೆ ಅನುಮತಿ ನಿರಾಕರಿಸಲಾಗಿದೆ.
ಜೆಜೆ ಆಸ್ಪತ್ರೆಯ ಡೀನ್ ಡಾ.ಟಿಪಿ ಲಹಾನೆ ಅವರನ್ನು ಭೇಟಿ ಮಾಡಿರುವ ಗುಂಜನ್ ಮಂಗಳಾ ಸುಮಾರು 30 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಇನ್ನೂ ಮೂರು ದಿನಗಳ ವರೆಗೆ ಇಂದ್ರಾಣಿ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಡೀನ್ ಡಾ.ಟಿಪಿ ಲಹಾನೆ ಹೇಳಿದ್ದಾರೆ.
ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಪ್ರಮುಖರ್ಜಿ ಪ್ರಮುಖ ಆರೋಪಿಯಾಗಿದ್ದು ಸೆ.11 ರಿಂದ ಮೂರ್ಛೆರೋಗಕ್ಕೆ ಔಷಧಿ ತೆಗೆದುಕೊಳ್ಳುತ್ತಿದ್ದರು ಎಂದು ಪೊಲೀಸರು ಜೆಜೆ ಆಸ್ಪತ್ರೆ ವೈದ್ಯರಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!