ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದಾದ್ರಿ ಪ್ರಕರಣ: ಇಬ್ಬರು ಪ್ರಮುಖ ಆರೋಪಿ ಬಂಧನ

ಮೊಹಮ್ಮದ್ ಇಕ್ಲಾಖ್ ಎಂಬುವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ...

ದಾದ್ರಿ ಪ್ರಕರಣ
Vishwanath S
Updated On : 3 Oct 2015, 4:25 am
ದಾದ್ರಿ: ಮೊಹಮ್ಮದ್ ಇಕ್ಲಾಖ್ ಎಂಬುವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 
ಉತ್ತರಪ್ರದೇಶದ ದಾದ್ರಿ ಬಳಿಯ ಬಿಶಾದಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಇಕ್ಲಾಖ್ ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಶಿವಂ ಮತ್ತು ವಿಶಾಲ್ ಎಂಬ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮೊಹಮ್ಮದ್ ಇಕ್ಲಾಖ್ ಮನೆ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿದ್ದು ಸ್ಥಳೀಯ ಬಿಜೆಪಿ ಮುಖಂಡನೊಬ್ಬನ ಪುತ್ರ ಎಂದು ಮೃತ ಕುಟುಂಬದವರು ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸಿದ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಮುಖಂಡನ ಪುತ್ರ ವಿಶಾಲ್ ಹಾಗೂ ಶಿವಂ ಎಂಬುವರನ್ನು ಬಂಧಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments