ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರ, ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಜನರ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂದು ಸಿಪಿಐ-ಎಂ ಆರೋಪಿಸಿದೆ.
ಮುರ್ಶಿದಾಬಾದ್ ಹರಿಹರ್ ಪಾರದ ಸ್ಥಳಿಯಾಡಳಿತ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಪರಿಣಾಮ, ಮತದಾರರಿಗೆ ಮತಗಟ್ಟೆ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ, ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಪಿಐ(ಎಂ) ಸರ್ಕಾರ ಜನರ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂದು ಆರೋಪಿಸಿದೆ.
ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿರುವ ಸಿಪಿಐಎಂ, ಪ್ರಜಾಪ್ರಭುತ್ವವನ್ನು ಬೆಂಬಲಿಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಆಹ್ವಾನ ನೀಡಿದೆ. ಜನರ ಮತದಾನದ ಹಕ್ಕನ್ನು ಪಶ್ಚಿಮ ಬಂಗಾಳ ಸರ್ಕಾರ ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದೆ ಅ.5 ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುರ್ಜಯ್ ಕಾಂತ್ ಮಿಶ್ರಾ ಹೇಳಿದ್ದಾರೆ.
ನಕಲಿ ಮತದಾನ ನಡೆದಿರುವ ಆರೋಪವೂ ಕೇಳಿಬಂದಿದ್ದು ಮರು ಮತದಾನ ನಡೆಸಬೇಕು ಎಂದು ಮಿಶ್ರಾ ಆಗ್ರಹಿಸಿದ್ದಾರೆ.