ಮುಸ್ಲಿಂ ಸತ್ತರೆ 20 ಲಕ್ಷ ಪರಿಹಾರ, ಹಿಂದೂಗಳಿಗೆ 20 ಸಾವಿರ : ಸಾಕ್ಷಿ ಮಹಾರಾಜ್
ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿ ಮಾಡುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...
ನವದೆಹಲಿ: ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿ ಮಾಡುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾದ್ರಿ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು ಪ್ರಕರಣದಲ್ಲಿ ಹತ್ಯೆಯಾದ ಮುಸ್ಲಿಂ ವ್ಯಕ್ತಿಯ ಕುಟಂಬಕ್ಕೆ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಆದರೆ ಹಿಂದೂ ವ್ಯಕ್ತಿ ಸತ್ತರೆ 20 ಸಾವಿರ ರೂಪಾಯಿ ಕೂಡ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.
ಮೊದಲಿಗೆ ಮೃತ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದರು. ನಂತರ 20 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.
ಇನ್ನು ಪ್ರಕರಣ ಸಂಬಂಧ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿರುವ ಸಾಕ್ಷಿ ಮಹಾರಾಜ್ ಲಾಲು ಪ್ರಸಾದ್ ಒಬ್ಬ ಹುಚ್ಚ ಎಂದು ಲೇವಡಿ ಮಾಡಿದ್ದಾರೆ. ಹಿಂದೂಗಳು ಕೂಡ ಗೋಮಾಂಸ ತಿನ್ನುವಂತೆ ಲಾಲು ಪ್ರಸಾದ್ ಯಾದವ್ ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.