2ನೇ ಬಾಬ್ರಿಯಾಗುತ್ತಿದೆ ದಾದ್ರಿ:ಅಜಂ ಖಾನ್
ದಾದ್ರಿ ಮತ್ತೊಂದು ಬಾಬರಿ ಮಸೀದಿಯಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ. ...
ಲಖ್ನೌ: ದಾದ್ರಿ ಮತ್ತೊಂದು ಬಾಬರಿ ಮಸೀದಿಯಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ. ದಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಜಂ ಖಾನ್ ನ್ಯಾಯಕ್ಕಾಗಿ ವಿಶ್ವ ಸಂಸ್ಥೆಯ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದ ಸಂದರ್ಭದಲ್ಲಿ ನಿರ್ಮಾಣವಾಗಿದ್ದ ಪರಿಸ್ಥಿತಿ ದಾದ್ರಿಯಲ್ಲಿ ನಿರ್ಮಾಣವಾಗಿದೆ, ದೇಶದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿ ಘೋಷಿಸಿದೆ, ಆದರೆ ಬಾರತದಲ್ಲಿರುವ ಮುಸ್ಲಿಮರು ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಮುಸ್ಲಿಮರಿಗೆ ಜಾಗ ಇಲ್ಲ ಎಂದಾದರೆ ಪಾಕಿಸ್ತಾನದ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿರುವ ಅವರು, ಸರ್ಕಾರದ ನೀತಿ ನಿಯಮಗಳ ಪ್ರಕಾರ ಬದುಕಬೇಕಾದರೇ ಮುಸ್ಲಿಮರ ಸ್ಥಿತಿಗತಿ ಹೇಗಿರುತ್ತದೆ ಎಂದು ಪ್ರಶ್ನಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.