ಸಾಂದರ್ಭಿಕ ಚಿತ್ರ 
ದೇಶ

ಕುಪ್ವಾರ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ, 4 ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು,..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಕನಿಷ್ಠ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಕುಪ್ವಾರ ಜಿಲ್ಲೆಯ ಹಫ್ರಾಡಾ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಕುಪ್ವಾರ ಜಿಲ್ಲೆಯ ದೊರ್ಪೊರಾ ಗ್ರಾಮದಲ್ಲಿ ಒರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಪ್ವಾರ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರೊಂದಿಗೆ ಗುಂಡಿನ ಕಾಳ ನಡೆಯುತ್ತಿದೆ.

ನಿನ್ನೆ ಅಥವಾ ಇದಕ್ಕೂ ಮೊದಲು ಉಗ್ರರು ಅಕ್ರಮವಾಗಿ ಕಾಶ್ಮೀರವನ್ನು ಪ್ರವೇಶಿಸಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಉಗ್ರರೊಂದಿಗೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT