ಮೃತ ವ್ಯಕ್ತಿಯ ಕುಟುಂಬಸ್ಥರು 
ದೇಶ

ದಾದ್ರಿ ಹತ್ಯೆ ಪ್ರಕರಣ: ಯುಪಿ ಸರ್ಕಾರ ನೀಡಿದ ವರದಿಯಲ್ಲಿ ಗೋಮಾಂಸದ ಪ್ರಸ್ತಾಪವಿಲ್ಲ

ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲೇಶ್ ಯಾದವ್ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯಲ್ಲಿ...

ಲಕ್ನೋ: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲೇಶ್ ಯಾದವ್ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯಲ್ಲಿ ಎಲ್ಲಿಯೂ ಗೋಮಾಂಸದ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದು ಬಂದಿದೆ.

ವರದಿಯಲ್ಲಿ 'ಗೋ ಮಾಂಸ ಭಕ್ಷಣೆ ಅಥವಾ ಗೋ ಮಾಂಸ ಸಂಗ್ರಹ' ಎಂಬ ವಿಷಯವನ್ನೇ ಕೈ ಬಿಡಲಾಗಿದೆ. ಈ ರೀತಿಯ ಗಾಳಿ ಸುದ್ದಿ ಹರಡಿಯೇ ಮೊಹಮ್ಮದ್ ಅಖ್ಲಾಖ್ ಅವರನ್ನು ಕೊಲ್ಲಲಾಗಿದೆ ಎಂದು ಎಫ್‌ಐಆರ್‌ನಲ್ಲಿಯೂ ದಾಖಲಿಸಲಾಗಿದೆ.

ಘಟನೆ ನಡೆದ ನಾಲ್ಕು ದಿನಗಳ ನಂತರ ರಾಜ್ಯ ಸರಕಾರ  ಕೇಂದ್ರಕ್ಕೆ ವರದಿ ನೀಡಿದೆ. ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿ, ಎಫ್‌ಐಆರ್‌ನಲ್ಲಿ ದಾಖಲಿಸಿದ ಅಂಶಗಳನ್ನೇ ಕೈ ಬಿಡಲಾಗಿದೆ. ವರದಿಯಲ್ಲಿ ಅಪರಿಚಿತ ವ್ಯಕ್ತಿಗಳಿಂದ ಅಖ್ಲಾಖ್ ಹಾಗೂ ಅವರ ಮಗನ ಮೇಲೆ 'ಮಾರಾಟ ನಿಷೇಧಿಸಿದ ಪ್ರಾಣಿಯೊಂದರ ಮಾಂಸ ಸೇವಿಸಿದ' ಆರೋಪದ ಮೇಲೆ ಹಲ್ಲೆ ನಡೆಸಲಾಗಿದೆ, ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯಾವ ಕಾರಣದಿಂದ ಗಲಭೆ ನಡೆದ ಸಾಧ್ಯತೆ ಇದೆಯೋ, ಆ ಅಂಶವನ್ನು ಉತ್ತರ ಪ್ರದೇಶ ಸರಕಾರ ಕೇಂದ್ರಕ್ಕೆ ನೀಡಿದ ವರದಿಯಲ್ಲಿ ಸೇರಿಸಿಲ್ಲ. ದಾದ್ರಿಯಲ್ಲಿ ದಾಖಲಿಸಿದ ಎಫ್‌ಐಆರ್ ಅನ್ನು ಪುನರ್ ರಚಿಸಲಾಗಿದೆ, ಎಂದು ಹಿರಿಯ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel