(ಸಾಂದರ್ಭಿಕ ಚಿತ್ರ) 
ದೇಶ

ಪತ್ತೆಯಾಯ್ತು ಗೋವುಗಳ ಶವ: ಜಮ್ಮುವಿನಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತ

ಜಮ್ಮುವಿನ ಉಧಂಪುರ ಜಿಲ್ಲೆಯಲ್ಲಿ ಮೂರು ಗೋವುಗಳ ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ಭಯಭೀತಗೊಂಡ ಸ್ಥಳೀಯ ಅಧಿಕಾರಿಗಳು ಜಮ್ಮುವಿನಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಗುರುವಾರ ಸ್ಥಗಿತಗೊಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ...

ಜಮ್ಮು: ಜಮ್ಮುವಿನ ಉಧಂಪುರ ಜಿಲ್ಲೆಯಲ್ಲಿ ಮೂರು ಗೋವುಗಳ ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ಭಯಭೀತಗೊಂಡ ಸ್ಥಳೀಯ ಅಧಿಕಾರಿಗಳು ಜಮ್ಮುವಿನಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಗುರುವಾರ ಸ್ಥಗಿತಗೊಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜಮ್ಮುವಿನ ಸ್ವತಂತ್ರ ಶಾಸಕನೊಬ್ಬ ಏರ್ಪಡಿಸಿದ್ದ ಗೋಮಾಂಸ ಪಾರ್ಟಿಗೆ ಇತ್ತೀಚೆಗಷ್ಟೇ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿತ್ತು. ಇದೀಗ ಜಮ್ಮುವಿನಲ್ಲಿ ಗೋವುಗಳ ಶವ ಪತ್ತೆಯಾಗಿರುವುದು ಅಧಿಕಾರಿಗಳಲ್ಲಿ ಭಯವನ್ನುಂಟು ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಇದೀಗ ಅಲ್ಲಿನ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಾಗಿದ್ದು, ಪ್ರತೀಯೊಂದು ವಿಷಯದ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವುದು ಅಧಿಕಾರಿಗಳಲ್ಲಿ ಭಯವನ್ನುಂಟು ಮಾಡಿದೆ. ಒಂದು ರೀತಿಯಲ್ಲಿ ಸಾಮಾಜಿಕ ಜಾಲತಾಣ ಕೂಡ ಕೋಮು ಗಲಭೆಗಳಂತಹ ವಿಷಯಗಳ ಚರ್ಚೆಗಳಿಗೆ ಪ್ರಮುಖ ವೇದಿಕೆಯಾಗುತ್ತಿರುವುದು ಇದೀಗ ಅಧಿಕಾರಿಗಳಲ್ಲಿ ಸಾಕಷ್ಟುರಿ ಭಯವನ್ನುಟು ಮಾಡಿದೆ.

ಉಧಂಪುರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಕಚೇರಿ ಬಳಿ ಇದೀಗ ಮೂರು ಗೋವುಗಳ ಶವಗಳು ಪತ್ತೆಯಾಗಿದ್ದು, ವಿಷಯವೀಗ ಹಲವೆಡೆ ಹರಡುತ್ತಿದೆ. ಹೀಗಾಗಿ ಸ್ಥಳದಲ್ಲಿ ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಭಾರೀ ಜನಜಂಗುಳಿ ನೆರೆಯುತ್ತಿದೆ. ಭಯಭೀತರಾಗುತ್ತಿರುವ ಮಾಲೀಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುತ್ತಿದ್ದಾರೆ ಎಂದು ಉಧಂಪುರ ಎಸ್ಎಸ್ ಪಿ ಮೊಹಮ್ಮದ್ ಸುಲೇಮಾನ್ ಚೌಧರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT