ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ) 
ದೇಶ

ಗುಲಾಂ ಅಲಿ ಸಂಗೀತ ಕಛೇರಿಯನ್ನು ಕೋಲ್ಕತಾದಲ್ಲಿ ಮಾಡಬಹುದು: ಮಮತಾ ಬ್ಯಾನರ್ಜಿ

ಮುಂಬೈ ನಲ್ಲಿ ಆಯೋಜಿಸಲಾಗಿದ್ದ ಪಾಕಿಸ್ತಾನದ ಖ್ಯಾತ ಘಜಲ್ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿಗೆ ಶಿವಸೇನೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಇದೀಗ ಪರೋಕ್ಷವಾಗಿ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕೋಲ್ಕಾತಾ: ಮುಂಬೈ ನಲ್ಲಿ ಆಯೋಜಿಸಲಾಗಿದ್ದ ಪಾಕಿಸ್ತಾನದ ಖ್ಯಾತ ಘಜಲ್ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿಗೆ ಶಿವಸೇನೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಇದೀಗ ಪರೋಕ್ಷವಾಗಿ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಗುಲಾಂ ಅಲಿ ಸಂಗೀತ ಕಛೇರಿಯನ್ನು ಕೋಲ್ಕತಾದಲ್ಲಿ ಮಾಡಬಹುದು ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಂಗೀತವೆಂಬುದು ಹೃದಯ ಬಡಿತವಿದ್ದಂತೆ ಅದಕ್ಕೆ ಇಂಥಹದ್ದೇ ಎಂಬ ಯಾವುದೇ ಮಿತಿಯೆಂಬುದಿರುವುದಿಲ್ಲ. ಬೇಕಿದ್ದರೆ ಗುಲಾಂ ಅಲಿಯವರ ಸಂಗೀತ ಕಛೇರಿಯನ್ನು ಕೋಲ್ಕತಾದಲ್ಲಿ ಆಯೋಜಿಸಿಬಹುದು. ಕಾರ್ಯಕ್ರಮಕ್ಕೆ ನಾವು ಸಿದ್ಧತೆ ನಡೆಸುತ್ತೇವೆಂದು ಹೇಳಿದ್ದಾರೆ.

ಶುಕ್ರವಾರ ಮುಂಬೈಯ ಷಣ್ಮುಖಾನಂದ್ ಹಾಲ್ ನಲ್ಲಿ ಗುಲಾಂ ಅಲಿ ಅವರ ಸಂಗೀತ ಕಛೇರಿ ಯನ್ನು ಏರ್ಪಡಿಸಲಾಗಿತ್ತು. ಆದರೆ, ಈ ಸಂಗೀತ ಕಛೇರಿಗೆ ಶಿವಸೇನೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿತ್ತು. ಗಡಿಯಲ್ಲಿ ಪಾಕಿಸ್ತಾನ ಸೇನೆಯು ನಮ್ಮ ಸೈನಿಕರನ್ನು ಹತ್ಯೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಭಾರತ ಪಾಕಿಸ್ತಾನದೊಂದಿಗೆ ಸಾಂಸ್ಕೃತಿಕ ಸಂಬಂಧ ಬೆಳೆಸಲು ಸಾಧ್ಯವಿಲ್ಲವಾಗಿದ್ದು, ಮುಂಬೈ ನಲ್ಲಿ ನಡೆಯಲಿರುವ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿತ್ತು. ಶಿವಸೇನೆಯ ತೀವ್ರ ವಿರೋಧದಿಂದಾಗಿ ಕಾರ್ಯಕ್ರಮದ ಆಯೋಜಕರು ಸಂಗೀತ ಕಛೇರಿಯನ್ನು ರದ್ದು ಮಾಡಿದ್ದರು. ಶಿವಸೇನೆಯ ಈ ನಡೆಯನ್ನು ಹಲವು ರಾಜಕೀಯ ಪಕ್ಷಗಳು ಹಾಗೂ ಸಾಂಸ್ಕೃತಿಕ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT