ಕೂಲ್ ಪ್ಯಾಡ್ 
ದೇಶ

ಚೀನಾದ ಕೂಲ್ ಪ್ಯಾಡ್ ಮೊಬೈಲ್ ಸಂಸ್ಥೆಯಿಂದ ಭಾರತದಲ್ಲಿ 2 ಸಾವಿರ ಕೋಟಿ ಹೂಡಿಕೆ

ಭಾರತದಲ್ಲಿ ಕಡಿಮೆ ದರದ ಮೊಬೈಲ್ ಗಳನ್ನು ತಯಾರಿಸಿ ಮಾರಾಟ ಮಾಡುವ ಯೋಜನೆ ಹೊಂದಿರುವ ಚೀನಾದ ಮೊಬೈಲ್ ತಯಾರಿಕಾ ಕಂಪನಿ ಕೂಲ್...

ನವದೆಹಲಿ: ಭಾರತದಲ್ಲಿ ಕಡಿಮೆ ದರದ ಮೊಬೈಲ್ ಗಳನ್ನು ತಯಾರಿಸಿ ಮಾರಾಟ ಮಾಡುವ ಯೋಜನೆ ಹೊಂದಿರುವ ಚೀನಾದ ಮೊಬೈಲ್ ತಯಾರಿಕಾ ಕಂಪನಿ ಕೂಲ್ ಪ್ಯಾಡ್ ರು. 1,950 ಕೋಟಿ ಬಂಡವಾಳ ತೊಡಗಿಸಲಿದೆ. 
ರಿಲಯನ್ಸ್ ಕಮ್ಯೂನಿಕೇಷನ್ಸ್ ಜತೆ ಪಾಲುದಾರಿಕೆಯೊಂದಿಗೆ ಭಾರತದಲ್ಲಿ 2007ರಲ್ಲೇ ಜಿಎಸ್ಎಂ ಮತ್ತು ಸಿಡಿಎಂಎ ಮೊಬೈಲ್ ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಆದರೆ ಇದೇ ಮೊದಲ ಬಾರಿಗೆ ಕೂಲ್ ಪ್ಯಾಡ್ ತನ್ನದೇ ಬ್ರಾಂಡ್ ಹೆಸರಿನಲ್ಲಿ ಸ್ಮಾರ್ಟ್ ಪೋನ್ ಬಿಡುಗಡೆ ಮಾಡುತ್ತಿದೆ. 
ಮೊಬೈಲ್ ತಯಾರಿಕೆ ಆರಂಭಿಸಲು 2017ರ ಮಾರ್ಚ್ ವರೆಗೆ ರು. 1,950 ಕೋಟಿ ಹೂಡಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಕೂಲ್ ಪ್ಯಾಡ್ ಗ್ರೂಪ್ ನ ಮುಖ್ಯ ಹಣಕಾಸು ಅಧಿಕಾರಿ ಜಿಯಾಂಗ್ ಚಾವೊ ಹೇಳಿದ್ದಾರೆ. 
ನಮ್ಮದು 300 ಕೋಟಿ ಡಾಲರ್ ಮೌಲ್ಯದ ಕಂಪನಿಯಾಗಿದ್ದು 6 ಸಾವಿರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ಹೊಂದಿದ್ದೇವೆ. ಭಾರತದ ಗ್ರಾಹಕರಿಗೆ ಹೆಚ್ಚಿನ ಮೌಲ್ಯವನ್ನು ಕಲ್ಪಿಸುವುದು ಕಂಪನಿಯ ಉದ್ದೇಶವಾಗಿದೆ ಎಂದಿದ್ದಾರೆ. ಫಾಕ್ಸ್ ಕಾನ್ ಸಹ ಭಾರತದಲ್ಲಿ ಬೃಹತ್ ಹೂಡಿಕೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)