ಪ್ರಣಬ್ ಮುಖರ್ಜಿ 
ದೇಶ

ಆರು ದಿನಗಳ ತ್ರಿರಾಷ್ಟ್ರ ಪ್ರವಾಸ ಹೊರಟ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ತ್ರಿರಾಷ್ಟ್ರ ಪ್ರವಾಸ ಕೈಗೊಂಡಿದ್ದು, ಆರು ದಿನಗಳ ಈ ಪ್ರವಾಸದಲ್ಲಿ ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ಟೆನ್ ದೇಶಗಳಿಗೆ...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ತ್ರಿರಾಷ್ಟ್ರ ಪ್ರವಾಸ ಕೈಗೊಂಡಿದ್ದು, ಆರು ದಿನಗಳ ಈ ಪ್ರವಾಸದಲ್ಲಿ ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ಟೆನ್ ದೇಶಗಳಿಗೆ ಭೇಟಿ ನೀಡಲಿದ್ದಾರೆ. 
ಪ್ರಣಬ್ ಮುಖರ್ಜಿಯವರು ಮೊದಲಿಗೆ ಜೋರ್ಡಾನ್​ಗೆ ಪ್ರಯಾಣ ಬೆಳೆಸಿದರು. ಇರಾಕ್​ನ ಮೊಸುಲ್ ಪಟ್ಟಣದಲ್ಲಿ ಐಸಿಸ್ ಉಗ್ರಗಾಮಿಗಳು ಹಿಡಿದಿಟ್ಟುಕೊಂಡಿರುವ 39 ಮಂದಿ ಭಾರತೀಯರ ಬಿಡುಗಡೆ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಸಹಕರಿಸುವಂತೆ ಮನವಿ ಮಾಡಲಿದ್ದಾರೆ. ಎರಡು ದಿನಗಳ ಜೋರ್ಡಾನ್ ಭೇಟಿಯ ಬಳಿಕ ರಾಷ್ಟ್ರಪತಿಗಳು ಅಕ್ಟೋಬರ್ 12ರಂದು ಪ್ಯಾಲೆಸ್ಟೆನ್ ​ಗೆ ಮತ್ತು ಬಳಿಕ ಅಕ್ಟೋಬರ್ 13ರಂದು ಇಸ್ರೇಲ್​ಗೆ ಪ್ರಯಾಣ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಪಯಣಕ್ಕೆ ಮುನ್ನ ರಾಷ್ಟ್ರಪತಿಗಳಿಗೆ ದೆಹಲಿಯಲ್ಲಿ ಔಪಚಾರಿಕವಾಗಿ ಬೀಳ್ಕೊಟ್ಟರು. ಪ್ರಣಬ್ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖ್ಯಸ್ಥ ಎನಿಸಿಕೊಳ್ಳಲಿದ್ದಾರೆ.
ಜೋರ್ಡಾನ್ ಭೇಟಿ ಕಾಲದಲ್ಲಿ ಉಭಯ ರಾಷ್ಟ್ರಗಳ ನಡುವಣ ವ್ಯಾಪಾರ ವೃದ್ಧಿ ಅವಕಾಶಗಳ ಬಗ್ಗೆ ಮುಖರ್ಜಿ ರ್ಚಚಿಸಲಿದ್ದಾರೆ. ರಾಜತಾಂತ್ರಿಕ ಬಾಂಧವ್ಯ ಸ್ಥಾಪಿಸಿದಂದಿನಿಂದ ಕಳೆದ 65 ವರ್ಷಗಳ ಅವಧಿಯಲ್ಲಿ ಈ ರಾಷ್ಟ್ರಗಳಿಗೆ ಪ್ರಯಾಣ ಮಾಡಿದ ಮೊದಲ ಭಾರತೀಯ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪ್ರಣಬ್ ಪಾತ್ರರಾಗಲಿದ್ದಾರೆ. 1988ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ಅವರು ಜೋರ್ಡಾನ್​ಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT