ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ (ಸಂಗ್ರಹ ಚಿತ್ರ) 
ದೇಶ

ದಾದ್ರಿ ಪ್ರಕರಣ: ನಾಯಕರ ವಿವಾದಾತ್ಮಕ ಹೇಳಿಕೆಯಿಂದ ದೂರ ಉಳಿದ ರಾಜನಾಥ ಸಿಂಗ್

ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡುತ್ತಿರುವ ವಿವಾದತ್ಮಕ ಹೇಳಿಕೆಯಿಂದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ದೂರ ಉಳಿದಿದ್ದು, ನಾಯಕರ ಹೇಳಿಗಳು ಪಕ್ಷದ ಹೇಳಿಕೆಯಲ್ಲ ಎಂದು ಶನಿವಾರ ಸ್ಪಷ್ಟನೆ ನೀಡಿದ್ದಾರೆ...

ಪಾಟ್ನ: ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡುತ್ತಿರುವ ವಿವಾದತ್ಮಕ ಹೇಳಿಕೆಯಿಂದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ದೂರ ಉಳಿದಿದ್ದು, ನಾಯಕರ ಹೇಳಿಗಳು ಪಕ್ಷದ ಹೇಳಿಕೆಯಲ್ಲ ಎಂದು ಶನಿವಾರ ಸ್ಪಷ್ಟನೆ ನೀಡಿದ್ದಾರೆ.

ದಾದ್ರಿ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡುತ್ತಿರು ವಿವಾದಾತ್ಮಕ ಹೇಳಿಕೆ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನಾಯಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ವೈಯಕ್ತಿಕ ಹೇಳಿಕೆಗಳು. ನಾಯಕರು ತಮ್ಮ ಶ್ರಮವನ್ನು ಸಂಯಮದಿಂದಿರಲು ವ್ಯಯಿಸಬೇಕಿದೆ ಎಂದು ಹೇಳಿದ್ದಾರೆ.
 
ದಾದ್ರಿ ಪ್ರಕರಣವೊಂದು ದುರಾದೃಷ್ಟಕರ ಘಟನೆ. ದೇಶದಲ್ಲಿ ಸಂಯಮ ಕಾಪಾಡಲು ಎಲ್ಲಾ ರಾಜಕೀಯ ಪಕ್ಷಗಳು ಶ್ರಮಿಸಬೇಕೇ ವಿನಃ ಶಾಂತವಾತಾವರಣವನ್ನು ಭಗ್ನಗೊಳಿಸುವ ಪ್ರಯತ್ನ ಮಾಡಬಾರದು. ಇಂತಹ ಪ್ರಕರಣಗಳು ನಡೆಯದಂತೆ ರಾಜ್ಯ ಸರ್ಕಾರಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ದಾದ್ರಿ ಪ್ರಕರಣ ಲಾಲೂ ಗೋಮಾಂಸ ಹೇಳಿಕೆ ಕುರಿತಂತೆ ಮಾತನಾಡಿರುವ ಅವರು, ಚುನಾವಣೆಯೊಂದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಇಂತಹ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ವಿಷಯಗಳು ಬರಬಾರದು. ಇಂತಹ ಹೇಳಿಕೆಗಳ ಅಗತ್ಯವಿಲ್ಲ. ಇಂತಹ ಹೇಳಿಕೆಗಳು ಜನರ ಗಮನವನ್ನು ಬೇರೆಡೆಗೆ ಕರೆದೊಯ್ಯುತ್ತದೆ. ಅಲ್ಲದೆ, ಪ್ರಚೋದನೆ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!