ಮತದಾರ 
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಶೇ.57ರಷ್ಟು ದಾಖಲೆ ಮತದಾನ

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಶಾಂತಿಯುತವಾಗಿ ನಡೆದಿದ್ದು, ಶೇ.57ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ ಎಂದು...

ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಶಾಂತಿಯುತವಾಗಿ ನಡೆದಿದ್ದು, ಶೇ.57ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದ 10 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ 49 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಇದುವರೆಗೆ ಯಾವುದೇ ಬಗೆಯ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮುಕ್ತಾಯದ ವೇಳೆಗೆ ಗರಿಷ್ಠ ಶೇ.57 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಮತದಾರರ ಸಂಖ್ಯೆ 1,35,72,339 ಇದ್ದು, ಅದರಲ್ಲಿ  72,37,253 ಪುರುಷರಿದ್ದರೆ, ಮಹಿಳೆಯರ ಸಂಖ್ಯೆ 63,17,602  ಉಳಿದಂತೆ ತೃತೀಯ ಲಿಂಗಿಗಳ ಸಂಖ್ಯೆ 405 ಇದೆ.  ಈ ಮತದಾರರು ಮೊದನೇ ಸುತ್ತಿನ ಮತದಾನದಲ್ಲಿ ಮತಚಲಾಯಿಸುತ್ತಿದ್ದು, ಚುನಾವಣಾ ಕಣದಲ್ಲಿರುವ ಒಟ್ಟು 583 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel