ಸುಧೀಂದ್ರ ಕುಲಕರ್ಣಿ 
ದೇಶ

ಶಿವಸೇನೆಯವರು ನನ್ನ ಮುಖಕ್ಕೆ ಮಸಿ ಬಳಿದರು: ಸುದೀಂದ್ರ ಕುಲಕರ್ಣಿ ಆರೋಪ

ಶಿವಸೇನಾ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ನನ್ನ ಮನೆ ಬಳಿ ಬಂದು ಮಸಿಯನ್ನು ಬಳಿದಿದ್ದಾರೆಂದು ಮಾಜಿ ಉಪ ಪ್ರಧಾನಿ...

ಮುಂಬೈ: ಶಿವಸೇನಾ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ನನ್ನ ಮನೆ ಬಳಿ ಬಂದು ಮಸಿಯನ್ನು ಬಳಿದಿದ್ದಾರೆಂದು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರ ಮಾಧ್ಯಮ ಸಲಹೆಗಾರರಾಗಿದ್ದಂತ ಸುಧೀಂದ್ರ ಕುಲಕರ್ಣಿ ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಶುಕ್ರವಾರ ನಡೆಯುವಂತಹ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳದಂತೆ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಕುಲಕರ್ಣಿ ಆರೋಪಿಸಿದ್ದಾರೆ. 
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭವನ್ನು ಕುಲಕರ್ಣಿ ಅವರ ಸಂಸ್ಥೆ ಆಯೋಜನೆ ಮಾಡಿತ್ತು. ಅದನ್ನು ವಿರೋಧಿಸಿ ಶಿವನಸೇನಾ ಕಾರ್ಯಕರ್ತರು ಈ ಕೃತ್ಯವನ್ನು ಮಾಡಿದ್ದಾರೆ ಎನ್ನುವ ಆರೋಪವನ್ನು ಮಾಡಿದ್ದಾರೆ. ಅವರ ಮನೆಯ ಮುಂಬಾಗಿಲಿಗೆ ಬಂದಂತಹ ಶಿವಸೇನೆ ಕಾರ್ಯಕರ್ತರ ತಂಡ ಅವರ ಮುಖಕ್ಕೆ ಮಸಿಯನ್ನು ಸುರಿದು ಅಲ್ಲಿಂದ ಪರಾರಿಯಾಗಿದ್ದಾರೆ. 
ನನ್ನ ಮುಖಕ್ಕೆ ಮಸಿ ಬಳಿದ ಹಾಗೆ, ಇವರು ನನ್ನ ಸಿದ್ಧಾಂತಗಳಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ದೂರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?